Breaking News

12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕ: ಚುನಾವಣಾ ಆಯೋಗ

Spread the love

ವದೆಹಲಿ: ದೇಶದ 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿದ್ದಾರೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ದೇಶದಲ್ಲಿ ಒಟ್ಟು 47.1 ಕೋಟಿ ಮಹಿಳೆಯರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕ: ಚುನಾವಣಾ ಆಯೋಗ

‘ದೇಶದಲ್ಲಿ ಲಿಂಗಾನುಪಾತದ ಪ್ರಮಾಣ 1000 ಪುರುಷರಿಗೆ 948 ಮಹಿಳೆಯರಿದ್ದಾರೆ. ಲಿಂಗಾನುಪಾತವು 1000ಕ್ಕಿಂತ ಹೆಚ್ಚಿರುವ 12 ರಾಜ್ಯಗಳಿವೆ. ಅಂದರೆ ಈ ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಿದೆ. 1.89 ಕೋಟಿ ಹೊಸ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 18-19 ವರ್ಷ ವಯಸ್ಸಿನವರು 85.3 ಲಕ್ಷ ಮಹಿಳಾ ಮತದಾರರಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಮಹಿಳೆಯರೂ ಸಮಾನವಾಗಿ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ’ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ ಮಾಡಿದ ಶಾಸಕ ವಿಠ್ಠಲ ಹಲಗೇಕರ

Spread the love ಖಾನಾಪೂರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ