Breaking News

ಕಲಬುರಗಿಯಲ್ಲೂ ದರ್ಶನ ಕೊಟ್ಟ ಮಳೆ

Spread the love

ಸುಡುವ ಬಿಸಿಲಿನ ನಡುವೆಯೂ ಕರ್ನಾಟಕದ ಹಲವು ಕಡೆಗಳಲ್ಲಿ ಲಘು ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಹಲವು ಕಡೆ ಮಳೆಯಾದ ಬಳಿಕ ಶನಿವಾರ ಸಂಜೆ ಕಲಬುರಗಿಯಲ್ಲಿ ಲಘು ಮಳೆಯಾಗಿದೆ.ಶನಿವಾರ ನಗರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣತೆ ಇತ್ತು. ಸಂಜೆ ಕಲಬುರಗಿ ನಗರದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು.
ಕೆಲವು ಕಡೆ 10 ನಿಮಿಷಗಳ ಸಾಧಾರಣ ಮಳೆಯಾಗಿದೆ. ಸುಡುವ ಬಿಸಿಲಿನ ನಡುವೆ ಹೀಗೆ 10- 15 ನಿಮಿಷ ಮಳೆಯಾದರೆ ಸೆಖೆ ಮತ್ತಷ್ಟು ಹೆಚ್ಚುತ್ತದೆ. ಹೀಗೆ ರಾಜ್ಯದ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿರುವುದು ಉತ್ತಮ ಮುಂಗಾರು ಆಗಮನ ಮುನ್ಸೂಚನೆ ಎನ್ನಲಾಗುತ್ತಿದೆ. Karnataka rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಮೂರು ದಿನಗಳ ಭಾರೀ ಮಳೆ ಮುನ್ಸೂಚನೆ4 ದಿನ 4 ಜಿಲ್ಲೆಗಳಲ್ಲಿ ಮಳೆರಾಯನ ದರ್ಶನಕಳೆದ ವಾರ ನಾಲ್ಕು ದಿನಗಳಲ್ಲಿ ನಾಲ್ಕು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಮಳೆ ದರ್ಶನ ನೀಡಿದೆ.

ಬುಧವಾರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಿಗ್ಗಾಲು, ಸೋಮವಾರಪೇಟೆ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿತ್ತು. ಬಳಿಕ ಗುರುವಾರ ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದಲ್ಲಿ ಉತ್ತಮ ಮಳೆಯಾಗಿತ್ತು. ಶುಕ್ರವಾರ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆಯಲ್ಲಿ 27 ಮಿಮೀ ಮಳೆಯಾಗಿತ್ತು. ಹೆಗ್ಗಡಹಳ್ಳಿ 9.5 ಮಿಮೀ, ಹಾಡ್ಯ 3.5 ಮಿಮೀ, ಕಲ್ಲಂಬಾಳು 3.5 ಮಿಮೀ ಮಳೆ ಸುರಿದಿತ್ತು.

 ಕಲಬುರಗಿಯಲ್ಲಿ ಲಘು ಮಳೆಯಾಗಿದೆ.ಮಾರ್ಚ್ 20ರ ನಂತರ ಮಳೆ ಸಾಧ್ಯತೆರಾಜ್ಯದ ಹಲವು ಕಡೆಗಳಲ್ಲಿ ಮಾರ್ಚ್ 20ರ ಬಳಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ, ಪಶ್ಚಿಮ ಘಟ್ಟಗಳಲ್ಲಿ ಚದುರಿದಂತೆ ಸಾಧಾರಣೆ ಮಳೆ ಸುರಿಯುವ ಸಾಧ್ಯತೆ ಇದೆ.ಮಾರ್ಚ್ ಅಂತ್ಯದ ವೇಳೆಗೆ ಮತ್ತು ಉಗಾದಿ ಹಬ್ಬದ ಸಂದರ್ಭದಲ್ಲಿ ಉತ್ತಮ ಮಳೆ ಬೀಳುವ ಅಂದಾಜಿದೆ. ಸದ್ಯದ ಹವಾಮಾನಾ ಮುನ್ಸೂಚನೆ ಪ್ರಕಾರ ಏಪ್ರಿಲ್ ಎರಡನೇ ವಾರ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚಾಗಿದೆ.

Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ