ಶಿವಮೊಗ್ಗ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜ್ಯದ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಭೇಟಿಗೆ ಬಂದಿದ್ದರು. ಬಂಡಾಯ ಸ್ಪರ್ಧೆಯ ಬಗ್ಗೆ ಚರ್ಚೆ ನಡೆಸಿದರು. ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದೇನೆ.
ಕಾಂತೇಶ್ ಗೆ ಎಂಎಲ್ ಸಿ ಮಾಡುವುದಾಗಿ ತಿಳಿಸಿದರು. ಇದು ಎಂಎಲ್‌ಎ, ಎಂಪಿ ಮಾಡುವ ವಿಚಾರವಲ್ಲ ಪಕ್ಷ ಶುದ್ದಿಕರಣವಾಗಬೇಕು. ರಾಜ್ಯದ ಅನೇಕ ಕಾರ್ಯಕರ್ತರು ನೋವು ಅನುಭವಿಸುತ್ತಿದ್ದಾರೆ. ಅದು ಸರಿಯಾಗಬೇಕು. ಹಿಂದುತ್ವವಾದಿಗಳಿಗೆ ತುಳಿಯುತ್ತಿದ್ದಾರೆ. ಅದು ಸರಿಯಾಗಬೇಕು. ಹಿಂದುತ್ವ ಉಳಿಸಬೇಕು ಪಕ್ಷ ಉಳಿಸಬೇಕು. ಕುಟುಂಬ ರಾಜಕಾರಣ ದೂರ ಆಗಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರ ಆಶಯದಂತೆ ಕರ್ನಾಟಕದಲ್ಲಿ ಬಿಜೆಪಿಯಲ್ಲಿ ಬದಲಾವಣೆ ಬರಬೇಕು. ನನ್ನ ಜೊತೆಗಿನ ಚರ್ಚೆಯನ್ನು ಬಿಜೆಪಿ ಹೈಕಮಾಂಡ್ ಗೆ ಅವರು ತಿಳಿಸುತ್ತಾರೆ ಎಂದರು.
Laxmi News 24×7