ಶ್ರೀಭೋಗನಂದೀಶ್ವರ ಆಲಯದಲ್ಲಿ ಭಕ್ತರು ದೀಪ ಹಚ್ಚುವಂತಿಲ್

Spread the love

ಚಿಕ್ಕಬಳ್ಳಾಪುರ: ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶೀ ಕ್ಷೇತ್ರವೆಂದೇ ಪ್ರತೀತಿಯಾಗಿರೋ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇಗುಲ ಹಾಗೂ ಆವರಣದಲ್ಲಿ ಈ ಬಾರಿ ದೀಪ ಹಚ್ಚುವಂತಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ.

ನಾಳೆ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಶ್ರೀಭೋಗನಂದೀಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಲಿವೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕೊರೊನಾ ಭೀತಿ ಆತಂಕದಿಂದ ಜಿಲ್ಲಾಡಳಿತ ಕೆಲ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್

Spread the love ಬೆಂಗಳೂರು: ಉದ್ಯೋಗಾಂಕ್ಷಿಗಳು  ಬಿಜೆಪಿ ಅವರ ಮಾತು ಕೇಳಿ ಎಫ್‌ಐಆರ್  ಹಾಕಿಸಿಕೊಂಡು ಕೋರ್ಟ್‌ಗೆ ಅಲೆದಾಟ ಮಾಡಬೇಡಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ