Breaking News

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

Spread the love

ಬೆಂಗಳೂರು,ಮಾ.18- ಮುಂದಿನ ಎರಡು ಮೂರು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದವಾರ ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಮಳೆಯಾಗಿತ್ತು.

ನಿನ್ನೆ ಬೀದರ್ ಮತ್ತು ಕಲಬುರಗಿಯಲ್ಲಿ ಮಳೆಯಾಗಿದ್ದು, ಮುಂದಿನ 2-3 ದಿನಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಸಾಧಾರಣವಾಗಿ ಮಳೆಯಾಗಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡಿನಲ್ಲಿ ಕಾಣಿಸಿಕೊಂಡಿರುವ ಟ್ರಪ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಕರ್ನಾಟಕದ ಮೇಲೂ ಬೀರಲಿದ್ದು, ದಕ್ಷಿಣ ಒಳನಾಡು ಮತ್ತು ಮಲೆನಾಡು ಇತರ ಪ್ರದೇಶಗಳಲ್ಲಿ ಮಳೆಯಾಗುವ ಸಂಭವ ಇದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ