Breaking News

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ, ಎತ್ತರಕ್ಕೆ ಬೆಳೆಸಿದ್ದಾರೋ ಗೊತ್ತಾಗಲಿದೆ;ವಿಜಯೇಂದ್ರ

Spread the love

ಬಿಎಸ್​ ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಲೋಕಸಭೆ ಚುನಾವಣೆ ಮುಗಿದ ಮೇಲೆ ಗೊತ್ತಾಗಲಿದೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ, ಬಿವೈ ವಿಜಯೇಂದ್ರ ಟಾಂಗ್​ ಕೊಟ್ಟರು.

ಶಿವಮೊಗ್ಗ, ಮಾರ್ಚ್​ 18: ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಬಿಎಸ್​ ಯಡಿಯೂರಪ್ಪ (BS Yediyurappa) ಮತ್ತು ಪುತ್ರ ಬಿವೈ ವಿಜಯೇಂದ್ರ (BY Vijayendra) ಮೇಲೆ ಮುನಿಸಿಕೊಂಡು, ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಈ ವಿಚಾರವಾಗಿ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಎಲ್ಲವೂ ಸರಿಯಾಗುತ್ತದೆ, ಎಲ್ಲವನ್ನು ಸರಿಪಡಿಸುವ ಕೆಲಸ ವರಿಷ್ಠರು ಮಾಡುತ್ತಾರೆ. ಬಿಎಸ್​ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ. ಸೈಕಲ್​ನಲ್ಲಿ ರಾಜ್ಯಾದ್ಯಂತ ಸುತ್ತಾಡಿ ಪಕ್ಷ ಕಟ್ಟಿದ ಫಲವಾಗಿ ರಾಜ್ಯದಲ್ಲಿ ಇಂದು ಪಕ್ಷ ಬಲಿಷ್ಠವಾಗಿದೆ.

ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ ಎಂದು ಪರೋಕ್ಷವಾಗಿ ಕೆಎಸ್​ ಈಶ್ವರಪ್ಪಗೆ ಟಾಂಗ್‌ ಕೊಟ್ಟರು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ