Home / ರಾಜಕೀಯ / ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು,

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು,

Spread the love

ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಮೃತಪಟ್ಟಿದ್ದಾರೆ, ತೀವ್ರ ರಕ್ತಸ್ರಾವವಾದ ಕಾರಣ ಬೇರೆ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಮಗು ಹಾಗೂ ತಾಯಿ ಇಬ್ಬರೂ ಮೃತಪಟ್ಟಿದ್ದಾರೆ. ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಬೆಳಗಾವಿ, ಮಾರ್ಚ್​.18: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ (Doctors Negligence). ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ( 28) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Doctors Negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು, ಕುಟುಂಬಸ್ಥರ ಆಕ್ರೋಶ

ಲಕ್ಷ್ಮೀಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ತಡರಾತ್ರಿ ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಲಕ್ಷ್ಮೀ ಬೆಳಗ್ಗೆ ಕಿಣೆಯ ಆಸ್ಪತ್ರೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮನೀಡಿದ್ದರು. ಈ ವೇಳೆ ತೀವ್ರ ರಕ್ತಸ್ರಾವವಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಸಾಗಿಸಲು ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಬಾಣಂತಿ, ಮಗು ಮೃತಪಟ್ಟಿದೆ.

ಬೆಳಗ್ಗೆ ಆಸ್ಪತ್ರೆಯಲ್ಲಿ ನಾರ್ಮಲ್ ಡಿಲೆವರಿ ಆದರೂ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ವೈದ್ಯರು ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿಲ್ಲ, ರಕ್ತಸ್ರಾವ ಆದರೂ ಗಮನಕ್ಕೆ ತರದೇ ನಿರ್ಲಕ್ಷ್ಯ ವಹಿಸಿದ್ದಾರೆ. ಆಸ್ಪತ್ರೆಗೆ ಸಾಗಿಸಲು ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡದೆ ಬೇಜವಾಬ್ದಾರಿತನ ಮೆರೆದಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಘಟನೆ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ