Breaking News
Home / ರಾಜಕೀಯ / ಬೆಳಗಾವಿ ಲೋಕಸಭಾ ಚುನಾವಣೆಗೆ ಒಪ್ತಾರಾ ಯತ್ನಾಳ್? ಏನು ಬಿಎಲ್ ಸಂತೋಷ್ ತಂತ್ರಗಾರಿಕೆ?

ಬೆಳಗಾವಿ ಲೋಕಸಭಾ ಚುನಾವಣೆಗೆ ಒಪ್ತಾರಾ ಯತ್ನಾಳ್? ಏನು ಬಿಎಲ್ ಸಂತೋಷ್ ತಂತ್ರಗಾರಿಕೆ?

Spread the love

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಬೆಳಗಾವಿಯ ಬಿಜೆಪಿ ಅಭ್ಯರ್ಥಿ (Belagavi BJP Candidate) ಎಂದು ಬಿಂಬಿತವಾಗಿದ್ದಾರೆ. ಧಾರವಾಡ (Dharwad) ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಶೆಟ್ಟರ್​ ಅವರಿಗೆ ಟಿಕೆಟ್ ತಪ್ಪಿದ್ದರಿಂದ ಬೆಳಗಾವಿಗೆ (Belagavi) ಕಳುಹಿಸಲಾಗುತ್ತಿದೆ ಎಂದು ಹೇಳಲಾಗಿತ್ತು.

ಆದರೆ ಟಿಕೆಟ್ ಘೋಷಣೆಗೂ ಮುನ್ನವೇ ಬೆಳಗಾವಿ ಬಿಜೆಪಿ ಘಟಕದಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಅಸಮಾಧಾನ ಉಂಟಾಗಿದೆ. ಎಂಎಲ್​ಸಿ ಮಹಾಂತೇಶ್ ಕವಟಗಿಮಠ ಸೇರಿದಂತೆ ಹಲವು ನಾಯಕರು (Belagavi BJP Leaders) ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಟಿಕೆಟ್ ನೀಡದಂತೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಹೊಸ ಹೆಸರನ್ನು ಬೆಳಗಾವಿ ಕ್ಷೇತ್ರಕ್ಕೆ ತೇಲಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 

ಹೌದು, ಜಗದೀಶ್ ಶೆಟ್ಟರ್ ಅವರ ಬದಲಾಗಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (BJP MLA Basanagouda Patil Yatnal)​ ಹೆಸರನ್ನು ಹೈಕಮಾಂಡ್ ಮುಂದೆ ಇರಿಸಿದ್ದಾರಂತೆ. ಈ ಹಿನ್ನೆಲೆ ವರಿಷ್ಠರ ಸೂಚನೆ ಮೇರೆಗೆ ಯತ್ನಾಳ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತ ಬಿಎಲ್ ಸಂತೋಷ್ ತಂತ್ರಗಾರಿಕೆ ಗಮನಕ್ಕೆ ಬರುತ್ತಿದ್ದಂತೆ ಜಗದೀಶ್ ಶೆಟ್ಟರ್ ಸಹ ದೆಹಲಿಗೆ ತೆರಳಿದ್ದಾರೆ. ಈ ಮೂಲಕ ಬೆಳಗಾವಿ ಟಿಕೆಟ್ ಪಡೆಯಲು ಜಗದೀಶ್ ಶೆಟ್ಟರ್ ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಏನು ಬಿಎಲ್ ಸಂತೋಷ್ ತಂತ್ರಗಾರಿಕೆ?

ಈ ಹಿಂದೆ ಕಾಂಗ್ರೆಸ್ ಸೇರ್ಪಡೆಯಾದ ಸಂದರ್ಭದಲ್ಲಿ ಬಿಎಲ್ ಸಂತೋಷ್ ವಿರುದ್ಧ ಜಗದೀಶ್ ಶೆಟ್ಟರ್ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು. ತಮಗೆ ವಿಧಾನಸಭಾ ಚುನಾವಣೆ ಟಿಕೆಟ್ ತಪ್ಪಲು ಸಂತೋಷ್ ಕಾರಣ ಎಂದು ಆರೋಪಿಸಿದ್ದರು.

ಇದೀಗ ಪಕ್ಷಕ್ಕೆ ಹಿಂದಿರುಗಿ ಬಂದರೂ ಬಿಎಲ್ ಸಂತೋಷ್ ಮತ್ತು ಜಗದೀಶ್ ಶೆಟ್ಟರ್ ನಡುವಿನ ರಾಜಕೀಯ ನಂಟು ಅಷ್ಟಕಷ್ಟೇ ಎಂಬ ಮಾತುಗಳಿವೆ. ಈ ಹಿನ್ನೆಲೆ ಬೆಳಗಾವಿಗೆ ಹೊಸ ಅಭ್ಯರ್ಥಿಯ ಹೆಸರನ್ನು ಮುನ್ನಲೆಗೆ ತಂದಿದ್ದಾರೆ ಎನ್ನಲಾಗಿದೆ.

ಸ್ಥಳೀಯ ನಾಯಕರಿಂದ ವ್ಯಾಪಕ ವಿರೋಧ

ಮತ್ತೊಂದೆಡೆ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯ ನಾಯಕರಿಂದಲೂ ವಿರೋಧ ವ್ಯಕ್ತವಾಗಿರೋದನ್ನು ಗಮನದಲ್ಲಿಟ್ಟುಕೊಂಡು ಬಸನಗೌಡ ಪಾಟೀಲ್ ಯತ್ನಾಳ್​ ಹೆಸರನ್ನು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಬಿಎಲ್ ಸಂತೋಷ್ ತಂತ್ರಗಾರಿಕೆ ತಿಳಿಯುತ್ತಲೇ ಅಲರ್ಟ್ ಆಗಿರೋ ಜಗದೀಶ್ ಶೆಟ್ಟರ್ ದೆಹಲಿಗೆ ತೆರಳಿದ್ದಾರೆ.

ಲೋಕಸಭಾ ಚುನಾವಣೆಗೆ ಒಪ್ತಾರಾ ಯತ್ನಾಳ್?

ಈ ಹಿಂದೆ ಬಾಗಲಕೋಟೆ ಕ್ಷೇತ್ರದಿಂದ ಯತ್ನಾಳ್ ಸ್ಪರ್ಧೆ ಮಾಡ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅಂತಿಮವಾಗಿ ಹಾಲಿ ಸಂಸದರಾಗಿರುವ ಪಿಸಿ ಗದ್ದಿಗೌಡರಿಗೆ (MP PC Gaddigouwdar) ಬಿಜೆಪಿ ಟಿಕೆಟ್ ನೀಡಿದೆ. ಯತ್ನಾಳ್ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ತಂತ್ರಗಾರಿಕೆಯನ್ನು ಯಡಿಯೂರಪ್ಪ ಮತ್ತು ವಿಜಯೇಂದ್ರ ಮಾಡಿದ್ದಾರೆ ಎನ್ನಲಾಗಿತ್ತು.

ಒಂದು ವೇಳೆ ಹೈಕಮಾಂಡ್ ಬೆಳಗಾವಿಯಿಂದ ಸ್ಪರ್ಧೆಗೆ ಸೂಚನೆ ನೀಡಿದ್ರೆ ಯತ್ನಾಳ್ ಒಪ್ಪಿಕೊಳ್ತಾರಾ? ಹಾಲಿ ಸಂಸದೆ ಮಂಗಳಾ ಅಂಗಡಿ ಅವರ ಮುಂದಿನ ನಡೆ ಏನಿರಬಹುದು ಎಂಬುವುದು ಮುಂದಿನ ದಿನಗಳಲ್ಲಿ ತಿಳಿದು ಬರಲಿದೆ.

20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ

ಈಗಾಗಲೇ ಬಿಜೆಪಿ 20 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿದೆ. ಶಿವಮೊಗ್ಗ, ಕೊಪ್ಪಳ, ದಾವಣಗೆರೆ, ತುಮಕೂರು ಕ್ಷೇತ್ರಗಳಲ್ಲಿ ಬಂಡಾಯದ ಅಲೆ ಎದ್ದಿದೆ. ಬೆಳಗಾವಿಯಲ್ಲಿ ಅಭ್ಯರ್ಥಿ ಘೋಷಣೆಗೂ ಮುನ್ನವೇ ಬಂಡಾಯ ಬಾವುಟ ಹಾರುವ ಲಕ್ಷಣಗಳು ಕಾಣಿಸುತ್ತಿವೆ.


Spread the love

About Laxminews 24x7

Check Also

ಮೊಸಳೆಗಳಿವೆ ಎಚ್ಚರಿಕೆ!

Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ