Breaking News

12 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

Spread the love

ಬೇಲೂರು: ಸಸ್ಯಶಾಸ್ತ್ರ ವಿಭಾಗದ ಪದವಿ ಪರೀಕ್ಷೆಯಲ್ಲಿ 12 ಚಿನ್ನದ ಪದಕ ಹಾಗೂ ನಗದು ಬಹುಮಾನ ಪಡೆದ ತಾಲ್ಲೂಕಿನ ಜಿ.ಆರ್.ಸಂಯಮ ಅವರನ್ನು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ತಾಲ್ಲೂಕು ಮಹಿಳಾ ಘಟಕದಿಂದ ಅಭಿನಂದಿಸಲಾಯಿತು.

ವಿದ್ಯಾರ್ಥಿನಿ ಜಿ.ಆರ್.ಸಂಯಮ ಅವರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಅನ್ನಪೂರ್ಣ ಚಂದ್ರಶೇಖರ್, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತಿದ್ದಾರೆ.

ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಮಹಿಳೆಯರ ಸಾಧನೆ ಸಾಕಷ್ಟಿದೆ ಎಂದರು. ಜಿ.ಆರ್.ಸಂಯಮ ಉತ್ತಮ ಸಾಧನೆ ಮಾಡಿದ್ದು, ಇವರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.

 

ಮಹಾಸಭಾ ತಾಲ್ಲೂಕು ಮಹಿಳಾ ಘಟಕದ ಪ್ರಧಾನಕಾರ್ಯದರ್ಶಿ ಹೇಮಾ, ರಾಜ್ಯ ಮಹಿಳಾ ಘಟಕದ ಸದಸ್ಯ ಜಯಶೀಲ ಜಯಶಂಕರ್, ನಿರ್ದೇಶಕರಾದ ಪ್ರೇಮಲೀಲಾ, ಸೌಭಾಗ್ಯ ಇದ್ದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ