Breaking News

ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಟಿಕೆಟ್; ಜಿಲ್ಲಾ ಬಿಜೆಪಿಯಲ್ಲಿ ತೀವ್ರ ಅಸಮಾಧಾನ

Spread the love

ಬೆಳಗಾವಿ, ಮಾ.16: ಧಾರವಾಡ ಮತ್ತು ಹಾವೇರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಟಿಕೆಟ್ ಕೈತಪ್ಪಿದ್ದಿಂದ ಗೊಂದಲಕ್ಕೀಡಾಗಿದ್ದಜಗದೀಶ್ ಶೆಟ್ಟರ್ (Jagadish Shettar)ಅವರಿಗೆ ಬೆಳಗಾವಿ (Belagavi) ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕ್ಷೇತ್ರದ ಹಾಲಿ ಸಂಸದೆ ಮಂಗಳಾ ಅಂಗಡಿ ಕೂಡ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಜಿಲ್ಲೆಯ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಹೈಕಮಾಂಡ್ ಘೋಷಣೆಗಾಗಿ ಸ್ಥಳೀಯ ನಾಯಕರು ಕಾಯುತ್ತಿದ್ದಾರೆ.

ಯಾರು ಏನು ಹೇಳಿದ್ದಾರೋ ಗೊತ್ತಿಲ್ಲ, ನಾನು ಟಿವಿ ನೋಡಿಲ್ಲ ಎಂದು ಹೇಳಿದ ಬಿಜೆಪಿ ಶಾಸಕ ಅಭಯ್ ಪಾಟೀಲ್, ನಮ್ಮಲ್ಲಿ ಸ್ಥಳೀಯವಾಗಿ ಅನೇಕ ನಾಯಕರು ಸ್ಪರ್ಧೆಗೆ ಸಮರ್ಥರಿದ್ದಾರೆ. ಹಾಗಾಗಿ ರಾಷ್ಟ್ರೀಯ ನಾಯಕರು ಅಧಿಕೃತವಾಗಿ ಹೇಳುವವರೆಗೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.

ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಟಿಕೆಟ್; ಜಿಲ್ಲಾ ಬಿಜೆಪಿಯಲ್ಲಿ ತೀವ್ರ ಅಸಮಾಧಾನ; ಕುತೂಹಲ ಕೆರಳಿಸಿದ ನಾಯಕರ ಹೇಳಿಕೆ

ಜಿಲ್ಲೆಯ ಪ್ರತಿಯೊಬ್ಬರು ಅಪೇಕ್ಷಿತರಿದ್ದಾರೆ. ಈ ಹಿಂದೆ ಬಾಬಾಗೌಡ, ಸುರೇಶ್ ಅಂಗಡಿ ಹಾಗೂ ಮಂಗಲಾ ಅಂಗಡಿಯವರು ನಮ್ಮ ಜಿಲ್ಲೆಯವರಿದ್ದರು. ನಮ್ಮ ಜಿಲ್ಲೆಯವರೇ ಅಭ್ಯರ್ಥಿ ಆಗಬೇಕು ಎಂಬುದು ಎಲ್ಲರ ಅಪೇಕ್ಷೆ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೊರಗಿನವರಿಗೆ ಟಿಕೆಟ್ ನೀಡದಂತೆ ಬಿಜೆಪಿ ನಾಯಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.

ಪ್ರಭಾಕರ್ ಕೋರೆ ಮನೆಯಲ್ಲಿ ರಹಸ್ಯ ಸಭೆ ವಿಚಾರವಾಗಿ ಮಾತನಾಡಿದ ಅಭಯ್ ಪಾಟೀಲ್, ಕೋರ್ ಕಮಿಟಿ ಸಭೆಯಲ್ಲಿ ಅನೇಕ ವಿಷಯಗಳು ಚರ್ಚೆ ಆಗಿವೆ. ಅದನ್ನ ಹಿರಿಯರ ಗಮನಕ್ಕೆ ತರುವ ಕೆಲಸ ಸಾಮೂಹಿಕವಾಗಿ ಮಾಡಲಾಗುತ್ತದೆ. ಒಬ್ಬರೆ ಟಿಕೆಟ್ ಫೈನಲ್ ಮಾಡುವಂತದ್ದು ಅಲ್ಲ, ಪಕ್ಷದ ಎಲ್ಲರೂ ಕೂಡಿ ನಿರ್ಣಯ ತೆಗೆದುಕೊಳ್ಳುತ್ತಾರೆ. ಕಳೆದ ಬಾರಿ ಲೀಡ್​ಗಿಂತ 10 ಪಟ್ಟು ಹೆಚ್ಚಿನ ಲೀಡ್ ಪಡೆದುಕೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇವೆ. ಟಿಕೆಟ್ ವಿಚಾರ ಬಂದಾಗ ಅದನ್ನೂ ಚರ್ಚೆ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ