Breaking News

ಜೆಡಿಎಸ್ ಅಭ್ಯರ್ಥಿಗಳ ಘೋಷಣೆ ಇನ್ನಷ್ಟು ವಿಳಂಬ

Spread the love

ಬೆಂಗಳೂರು: ಒಂದೆಡೆ ಮೈತ್ರಿ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಳಂಬ, ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ೋಷಣೆ ಮತ್ತಷ್ಟು ವಿಳಂಬವಾಗಲಿದೆ.

 

ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರೂ ಕೋಲಾರ ವಿಚಾರದಲ್ಲಿ ಇನ್ನೂ ಅನಿಶ್ಚಿತತೆ ಮುಂದುವರಿದಿದೆ.

 

ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್‌ಗೆ ಮೂರು ಕ್ಷೇತ್ರ ಕೊಡುತ್ತೇವೆ ಎಂದು ಹೇಳಿದ್ದಾರೆ. ಕ್ಷೇತ್ರಗಳು ಅಂತಿಮವಾಗಬೇಕಿದೆ. ಕುಮಾರಸ್ವಾಮಿ ಚಿಕಿತ್ಸೆ ಪಡೆದು ವಾಪಸ್ ಬಂದ ಬಳಿಕ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಾರೆ ಎಂದರು.

 

ಶಾಸಕಿ ಶಾರದಾ ಪೂರ‌್ಯ ನಾಯಕ್ ಅವರು ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ರಾಜ್ಯಮಟ್ಟದ ಕೋರ್ ಕಮಿಟಿ ಮೀಟಿಂಗ್ ಇತ್ತು. ಹಾಗಾಗಿ ಬೇರೆ ಯಾವ ನಾಯಕರೂ ಭಾಗವಹಿಸಲು ಆಗಿಲ್ಲ. ಮೈತ್ರಿಯಲ್ಲಿ ಯಾವುದೇ ಗೊಂದಲ ಇಲ್ಲ, ಎಲ್ಲ ಸರಿಯಾಗಿದೆ. ಪಕ್ಷದಲ್ಲಿ ಆಚೀಚೆ ಹೋಗುವುದು ಇದ್ದೇ ಇರುತ್ತದೆ. ಜಗದೀಶ ಶೆಟ್ಟರ್ ಹೋದವರು ವಾಪಸ್ ಬಂದಿಲ್ಲವೆ?

ಬಿಜೆಪಿಯವರು ಇಷ್ಟಪಟ್ಟು ಮಂಜುನಾಥ್‌ಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ಜಿ.ಟಿ.ದೇವೇಗೌಡ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ