ಬೆಂಗಳೂರು : ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಕಾರಣಿಗಳಿಗೆ ಸರ್ಕಾರಿ ವಾಹನ ನೀಡದಂತೆ ಸೂಚನೆ ನೀಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದ್ದು, ಸರ್ಕಾರಿ ವಾಹನಗಳ ಬಳಕೆ ಕುರಿತಂತೆ ಚುನಾವಣಾ ಆಯೋಗ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಸರ್ಕಾರಿ ವಾಹನಗಳನ್ನು ರಾಜಕಾರಣಿಗಳು ಹಾಗೂ ರಾಜಕೀಯ ಪಕ್ಷಗಳು ಯಾವುದೇ ಕಾರ್ಯಕ್ಕೂ ಬಳಸಬಾರದು. ಚುನಾವಣಾ ಪ್ರಚಾರ ಸೇರಿ ರಾಜಕೀಯ ಪಕ್ ಹಾಗೂ ವ್ಯಕ್ತಿಗಳ ಪರವಾಗಿ ವಾಹನಗಳ ಬಳಕೆ ನಿರ್ಬಂಧಿಸಲಾಗಿದೆ.
Laxmi News 24×7