Breaking News

ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು!

Spread the love

ಚೆನ್ನೈ: ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್​ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಮಂಗಳವಾರ ಹೇಳಿದ್ದರು.

 

 

ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಡಿಎಂಕೆಯ ಆರ್.ಎಸ್ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈಬಗ್ಗೆ ಡಿಎಂಕೆ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದೆ

.ಶೋಭಾ ಕರಂದ್ಲಾಜೆ ಕ್ಷಮೆಯಾಚನೆ: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ