Breaking News

ಲೋಕಸಭೆ ಚುನಾವಣೆ: ಕಂಡ ಕಂಡಲ್ಲಿ ಪೋಸ್ಟರ್ ಅಂಟಿಸಿದರೆ ಜೈಲು!

Spread the love

ಬೆಂಗಳೂರು, ಮಾರ್ಚ್ 20: ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾಗಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಚುನಾವಣಾ ಪ್ರಚಾರ ಆರಂಭವಾಗಿದೆ.ಲೋಕಸಭೆ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವುಗಳನ್ನು ಪಾಲನೆ ಮಾಡಬೇಕಿದೆ.

ಅದರಲ್ಲೂ ಗೋಡೆ ಮೇಲೆ ಕಂಡ ಕಂಡಲ್ಲಿ ಪೋಸ್ಟರ್‌ಗಳನ್ನು ಅಂಟಿಸುವಂತಿಲ್ಲ. ಸಾರ್ವಜನಿಕ ಆಸ್ತಿಯನ್ನಾಗಲೀ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ ಕಾಣುವಂತೆ ಗೋಡೆ ಬರಹ, ಜಾಹೀರಾತು ಪೋಸ್ಟರ್ ಆಳವಡಿಕೆ ಸೇರಿದಂತೆ ಇನ್ನಿತರ ಫಲಕಗಳನ್ನು ಹಾಕುವ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ವಿರೂಪಗೊಳಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಅನುಮತಿ ಪಡೆಯುವುದು ಕಡ್ಡಾಯ: ಸಾರ್ವಜನಿಕ ಪ್ರದೇಶಗಳ ಮೇಲೆ ಅಧಿಕಾರ ಹೊಂದಿರುವ ಸ್ಥಳೀಯ ಪ್ರಾಧಿಕಾರದಿಂದ ಲಿಖಿತ ಅನುಮತಿಯಿಲ್ಲದೇ ಯಾವುದೇ ತರಹದ ಗೋಡೆ ಬರಹ, ಜಾಹೀರಾತು ಪೋಸ್ಟರ್ ಅಳವಡಿಸುವಂತಿಲ್ಲ.

ಸಾರ್ವಜನಿಕ ವೀಕ್ಷಣೆಗೆ ತೆರೆದಿರುವ ಯಾವುದೇ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಬಾರದು ಮತ್ತು ಕೆತ್ತನೆ ಮಾಡುವಂತಿಲ್ಲ. ಇಂತಹ ಕೃತ್ಯಗಳಿಗೆ ಕುಮ್ಮಕ್ಕು ಅಥವಾ ಸಲಹೆ ನೀಡಿದರೆ ಅಂತಹವರನ್ನು 6 ತಿಂಗಳು ಕಾರಾಗೃಹ ಶಿಕ್ಷೆ ಸೇರಿದಂತೆ ದಂಡ ವಿಧಿಸಬಹುದಾಗಿದೆ ಎಂದು ಎಚ್ಚರಿಸಲಾಗಿದೆ.

ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣೆ ಪ್ರಚಾರದಿಂದ ಇಂತಹ ವಿರೂಪಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಸ್ಥಳೀಯ ಪ್ರಾಧಿಕಾರದ ಪರವಾನಿಗೆ ಇಲ್ಲದೇ ಯಾವುದೇ ತರಹದ ಜಾಹೀರಾತುಗಳನ್ನು ಸಾರ್ವಜನಿಕ ವೀಕ್ಷಣೆಗೆ ತೆರೆದಿರುವ ಯಾವುದೇ ಸ್ಥಳಗಳಲ್ಲಿ ಪ್ರದರ್ಶಿಸುವಂತಿಲ್ಲ.

ಸಾರ್ವಜನಿಕ, ಖಾಸಗಿ ಕಟ್ಟಡಗಳು ಮತ್ತು ಇತರ ತೆರೆದ ಸ್ಥಳಗಳ ಗೋಡೆಗಳ ಮೇಲೆ ಬರೆದು ಅಥವಾ ಭಿತ್ತಿಪತ್ರಗಳನ್ನು ಬರೆದು ವಿರೂಪಗೊಳಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ 6 ತಿಂಗಳವರೆಗೆ ಹಾಗೂ ವಿಸ್ತರಿಸಬಹುದಾದಂತಹ ದಂಡನೆಗೆ ಗುರಿ ಪಡಿಸಲಾಗುತ್ತದೆ. ಈ ಆದೇಶ ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ ಜಾರಿಯಲ್ಲಿರುತ್ತದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ