ಬೆಂಗಳೂರು, ಮಾರ್ಚ್ 20: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದ್ದು, ಗೆಲ್ಲುವ ಅಭ್ಯರ್ಥಿಯ ಹುಡುಕಾಟವನ್ನ ಕಾಂಗ್ರೆಸ್ ಹಾಗೂ ಬಿಜೆಪಿ ನಡೆಸುತ್ತಿದೆ.
ಇತ್ತ ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಬರಲಿದೆ.
ಲೋಕಸಮರಕ್ಕೆ ಬಿಜೆಪಿ – ಜೆಡಿಎಸ್ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷಗಳು ಚುನಾವಣೆಗೆ ರೆಡಿಯಾಗುತ್ತಿದ್ದು, ಇದರ ನಡುವೆಯೇ ಸಮೀಕ್ಷೆಯೊಂದು ಪ್ರಕಟವಾಗಿದ್ದು, 28 ಕ್ಷೇತ್ರಗಳನ್ನು ಗೆಲ್ಲುವ ಕನಸು ಹೊತ್ತಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಾಕ್ ನೀಡಿದ್ದರೆ, ಆಡಳಿತಾರೂಢ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.ಈಗಾಗಲೇ ಹಲವು ಸಮೀಕ್ಷೆಗಳು ಬಹಿರಂಗಗೊಂಡಿದ್ದು, ಬಹುತೇಕ ಸರ್ವೆಯಲ್ಲಿ ಬಿಜೆಪಿ -ಜೆಡಿಎಸ್ 23 ರಿಂದ 25 ಕ್ಷೇತ್ರಗಳನ್ನ ಗೆಲ್ಲುವ ಸಾಧ್ಯತೆ ಇದ್ದು,ಕಾಂಗ್ರೆಸ್ 4-5 ಕ್ಷೇತ್ರಗಳಲ್ಲಿ ಗೆಲುವ ಸಾಧ್ಯತೆ ಇದೆ ಎಂದು ಹೇಳಿವೆ.
ಈ ದಿನ ನಡೆಸಿದ ಮೆಗಾ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಕಾಂಗ್ರೆಸ್ ಅತಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲಿದೆ. ಗ್ಯಾರಂಟಿಗಳನ್ನ ಕೊಟ್ಟಿರುವ ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದು ಹೇಳಿದೆ.
Laxmi News 24×7