ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಮಿಸ್ ಆಗಿದ್ದು ಅಣ್ಣ ಸಾಹೇಬ ಜೊಲ್ಲೆಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ ಈ ಕುರಿತು ರಮೇಶ್ ಕತ್ತಿ ಬೇಸರ ವ್ಯಕ್ತಪಡಿಸಿದ್ದು, ಯಾಕೆ ಟಿಕೆಟ್ ಕೈತಪ್ಪಿದೆ ಎಂದು ನನಗೆ ಮಾಹಿತಿ ಇಲ್ಲ ಎಂದು ಅವರು ಬೇಸರ ಹೊರಹಕಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಿಕ್ಕೋಡಿಯಿಂದ ಅಣ್ಣಾ ಸಾಹೇಬ ಜೊಲ್ಲೆಗೆ ಟಿಕೆಟ್ ನೀಡಿದ್ದಾರೆ.ಪಕ್ಷದ ಕಾರ್ಯಕರ್ತನಾಗಿ ಅವರ ಗೆಲುವಿಗೆ ನಾನು ಶ್ರಮಿಸುತ್ತೇನೆ.
ಆದರೆ ಯಾವುದೇ ಕಾರಣಕ್ಕೆ ನಾನು ಪಕ್ಷವನ್ನು ಬಿಡುವುದಿಲ್ಲ ಎಂದು ಬೆಳಗಾವಿಯಲ್ಲಿ ರಮೇಶ್ ಕತ್ತಿ ಸ್ಪಷ್ಟನೆ ನೀಡಿದರು.ಬಹುಶಹ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಲೋಕಸಭೆಯ ಅಭ್ಯರ್ಥಿಯಾಗಿ ನಾನು ಆಕಾಂಕ್ಷಿಯಾಗಿದ್ದೆ.
ಆ ನಿಟ್ಟಿನಲ್ಲಿ ನಮ್ಮ ಹಿರಿಯರು ಮರದರ್ಶಕರಾಗಿರುವ ಬಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಅವರು ತಮ್ಮದೇ ಆಗಿರುವಂತಹ ಸಾಕಷ್ಟು ಪ್ರಯತ್ನ ಮಾಡಿದರು ಸಹಿತ ಟಿಕೆಟ್ನಿಂದ ನಾನು ವಂಚಿತನಾಗಿದ್ದೇನೆ ಎಂದರು.
Laxmi News 24×7