Breaking News

ಕಿಟಕಿ ತೆರೆದು ದಂಪತಿ ಸರಸ ಸಲ್ಲಾಪ, ಬೆಡ್ ರೂಮ್ ಕಿಟಕಿ ಹಾಕಿಕೊಳ್ಳುವಂತೆಯೂ ಮನವಿ,ವಿಚಿತ್ರ ದೂರೊಂದು ದಾಖಲ…

Spread the love

ಬೆಂಗಳೂರು, ಮಾರ್ಚ್​ 20: ಇತ್ತೀಚಿನ ದಿನಗಳಲ್ಲಿ ಯುವಕ, ಯುವತಿಯರು ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗುವುದು ಹೆಚ್ಚಾಗುತ್ತಿವೆ ಎನ್ನುವ ಸುದ್ದಿಗಳು ಆಗುತ್ತಲೇ ಇರುತ್ತವೆ. ಆದರೆ ಬೆಂಗಳೂರಿನ ಈ ನಗರದಲ್ಲಿ ವಿಚಿತ್ರ ಪ್ರಕರಣವೊಂದು ದಾಖಲಾಗಿದೆ. ಹಾಗಾದರೆ ಆ ಪ್ರಕರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ.
ಪಕ್ಕದ ಮನೆ ದಂಪತಿಯು ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುತ್ತಿದ್ದಾರೆ. ಇದರಿಂದ ನಮಗೆ ತುಂಬಾ ಸಮಸ್ಯೆ ಆಗುತ್ತಿದೆ ಎಂದು 44 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮಹಿಳೆ ಆವಲಹಳ್ಳಿ, ಬಿಡಿಎ ಲೇಔಟ್‌ನಲ್ಲಿ ವಾಸ ಆಗಿದ್ದಾರೆ. ಈ ಮಹಿಳೆಯ ಮನೆಯ ಬಾಗಿಲಿನ ಪಕ್ಕದಲ್ಲೇ ಮನೆಯ ಬೆಡ್​ ರೂಮ್​ ಇದೆ.

ಕಿಟಕಿ ತೆರೆದು ದಂಪತಿ ಸರಸ ಸಲ್ಲಾಪ, ಪಕ್ಕದ ಮನೆ ಮಹಿಳೆಯಿಂದ ಪೊಲೀಸ್‌ ಠಾಣೆಗೆ ದೂರು-ಎಲ್ಲಿ?

ಇನ್ನು ಪಕ್ಕದ ಮನೆಯಲ್ಲಿ ವಾಸ ಆಗಿರುವ ದಂಪತಿ ಬೆಡ್ ರೂಮ್ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುವುದನ್ನು ಇವರು ನೋಡಿದ್ದು, ಈ ದಂಪತಿಗಳ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ದಂಪತಿಗಳಿಬ್ಬರ ಸರಸ ಸಲ್ಲಾಪವನ್ನು ನೋಡಿದ ಪಕ್ಕದ ಮನೆ ಮಹಿಳೆಯು ಮುಜುಗರಕ್ಕೆ ಒಳಗಾಗಿದ್ದಾರೆ. ನಂತರ ಅವರೊಗೆ ಬೆಡ್ ರೂಮ್ ಕಿಟಕಿ ಹಾಕಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ.
ಇದರಿಂದ ಕೋಪಗೊಂಡ ಪಕ್ಕದ ಮನೆಯ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಬೈದಿದ್ದಾನೆ.ಅಲ್ಲದೆ ಮಹಿಳೆ ಮೇಲೆ ಅತ್ಯಾಚಾರ ಮಾಡುವುದಾಗಿ ಮತ್ತು ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ.
ಅಷ್ಟೇ ಅಲ್ಲದೆ ಪಕ್ಕದ ಮನೆಯ ಮನೆ ಮಾಲೀಕ ಚಿಕ್ಕಣ್ಣ ಮತ್ತು ಅವರ ಮಗ ಮಂಜುನಾಥ್ ಕಿಟಕಿ ಹಾಕಿಕೊಳ್ಳುವಂತೆ ಮನವಿ ಮಾಡಿದ ಮಹಿಳೆ ಕುಟುಂಬದ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.
ನಂತರ ಕೆಲವು ಯುವಕರನ್ನು ಕರೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ.ಇವರಿಂದ ಮನನೊಂದ ಮಹಿಳೆಯು ನನಗೆ ಸೂಕ್ತ ರಕ್ಷಣೆ ನೀಡಿ ಹಾಗೂ ಬೆದರಿಕೆ ಹಾಕಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ದೂರು ದಾಖಲಿಸಿದ್ದಾರೆ.
ಇನ್ನು ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 504, 506, 509, 34ರಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ

Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ