Breaking News

ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ; ನಾಯಕರ ವಿರುದ್ಧ ವಾಗ್ದಾಳಿ

Spread the love

ಹುಬ್ಬಳ್ಳಿ: ವಿಧಾನ ಪರಿಷತ್ತು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮರಿತಿಬ್ಬೇಗೌಡ, ನಾನು ಸ್ವಇಚ್ಛೆಯಿಂದ ಪರಿಷತ್ತು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ.

JDS Leader; ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ; ನಾಯಕರ ವಿರುದ್ಧ ವಾಗ್ದಾಳಿ

ಜೆಡಿಎಸ್ ನಲ್ಲಿ ಜಾತ್ಯತೀತ ತತ್ವಗಳು ಉಳಿದಿಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜವಾಗಿಲ್ಲ ಎಂದರು.

ನಾಲ್ಕು ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದೇನೆ. ಅಧಿವೇಶನದಲ್ಲಿ ವಿಷಯಾಧಾರಿತವಾಗಿ ಬೆಂಬಲ ನೀಡಿದ್ದೇನೆ. ಕೃಷಿ, ಎಪಿಎಂಸಿ ಕಾಯ್ದೆಗಳ ವಿಚಾರದಲ್ಲಿ ಜೆಡಿಎಸ್ ಅಂದಿನ ಆಡಳಿತ ಪಕ್ಷದ ಪರ ನಿಂತಿತು. ಆದರೆ ನಾನು ಆತ್ಮಸಾಕ್ಷಿ ಅನುಗುಣವಾಗಿ ರೈತರ ಪರ ನಿಲುವು ತಳೆದಿದ್ದೆ. ಜೆಡಿಎಸ್ ನಲ್ಲಿ ಯಾವುದೇ ಪ್ರಮುಖ ತೀರ್ಮಾನಗಳಲ್ಲಿ ಪಕ್ಷದ ಶಾಸಕರು, ನಾಯಕರನ್ನು ಕೇಳುತ್ತಿಲ್ಲ. ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರೇ ನಿರ್ಣಯಿಸುತ್ತಾರೆ ಎಂದರು.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ