Breaking News

ಲೋಕಸಭೆ ಚುನಾವಣೆ: ಪಿಎಸ್‌ಐ ಲಿಖಿತ ಪರೀಕ್ಷೆ ಮುಂದೂಡಿಕೆ

Spread the love

ಬೆಂಗಳೂರು, ಮಾರ್ಚ್ 21: ಲೋಕಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. ರಾಜ್ಯದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದೆ.ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಿಕೆ ಮಾಡಿದೆ.

ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ.ಲೋಕಸಭೆ ಚುನಾವಣೆ ನೀತಿ ಸಂಹಿತೆ: ಡಿಜಿಟಲ್ ವಹಿವಾಟು ನಿಯಮ ಈ ಕುರಿತು ಕಾರ್ಯನಿರ್ವಾಹಕ ನಿರ್ದೇಶಕರು ಕೆಇಎ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ

. ದಿನಾಂಕ 08/05/2024ರಂದು ನಿಗದಿ ಪಡಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಭ್ಯರ್ಥಿಗಳು ಚುನಾವಣೆ ಮುಗಿದ ಬಳಿಕ ಪರೀಕ್ಷೆ ಬರೆಯಬೇಕಿದೆ.ಲೋಕಸಭೆ ಚುನಾವಣೆ 2024; ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಆದೇಶದ ವಿವರ: ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ – ಪಿಎಸ್‌ಐ (402) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಎಂಬ ವಿಷಯವನ್ನು ಪ್ರಕಟಣೆ ಒಳಗೊಂಡಿದೆ ಸರ್ಕಾರದ ಆದೇಶ ದಿನಾಂಕ 22/02/2024ರನ್ವಯ ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ.KPSC: 50 ಹುದ್ದೆ ನೇಮಕಾತಿ, ವೇತನ 33 ರಿಂದ 62 ಸಾವಿರ ಅದರಂತೆ ದಿನಾಂಕ 08/05/2024ರಂದು ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.

ಆದರೆ ದೇಶಾದ್ಯಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ನೀತಿ ಸಂಹಿತೆ ಜಾರಿಯಲ್ಲಿರುವ ದಿನಾಂಕ 08/05/2024ರಂದು ನಡೆಸಲು ತೀರ್ಮಾನಿಸಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದೆ.ಯುಪಿಎಸ್‌ಸಿ ಪರೀಕ್ಷೆಯೂ ಮುಂದೂಡಿಕೆ: ಲೋಕಸಭೆಗೆ ಮೇ 26ರಂದು ಚುನಾವಣೆ ನಿಗದಿಯಾಗಿರುವ ಹಿನ್ನಲೆಯಲ್ಲಿ ಅಂದು ನಿಗದಿಯಾಗಿರುವ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆಯಾಗಿದೆ.

ಜೂನ್ 16ರಂದು ಪರೀಕ್ಷೆ ನಡೆಯಲಿದೆ.ಈ ಕುರಿತು ಈಗಾಗಲೇ ಕೇಂದ್ರ ಲೋಕಸೇವಾ ಆಯೋಗ ಈ ಕುರಿತು ಮಂಗಳವಾರ ಆದೇಶ ಹೊರಡಿಸಲಾಗಿದೆ. ಐಎಎಸ್, ಐಪಿಎಸ್ ಸೇರಿದಂತೆ ವಿವಿಧ ನಾಗರಿಕ ಸೇವಾ ಹುದ್ದೆಗಳಿಗೆ ನೇಮಕಾತಿ ಮಾಡಲು ಪ್ರತಿವರ್ಷ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಈಗ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ