Breaking News

ಬೆಳಗಾವಿ | ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಲೆ: ಸಿಎಂ ಸಿದ್ದರಾಮಯ್ಯ

Spread the love

ಬೆಳಗಾವಿ: ‘ನಾವು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳ ಕುರಿತು ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಬೆಳಗಾವಿ | ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಲೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಕಾವೇರಿಯಲ್ಲಿ ಶುಕ್ರವಾರ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ 80‌ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ವರದಿ ಸಮೀಕ್ಷೆಗಳಿಂದ ಬಂದಿವೆ’ ಎಂದರು.

‘ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ₹6,000 ಕೊಡುತ್ತಿರುವ ಮತ್ತು ವರ್ಷಕ್ಕೆ ₹50 ಸಾವಿರದಷ್ಟು ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿರಿ. ಜನರ ನಡುವೆ ಗಟ್ಟಿಯಾಗಿ ನಿಂತರೆ ಗೆಲುವು ಸುಲಭ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ‘ಬೆಳಗಾವಿಯಲ್ಲಿ ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ’ ಎಂದರು.

ಉತ್ತರ ಕನ್ನಡದಲ್ಲಿ ಬದಲಾವಣೆ ವಾತಾವರಣ: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರ ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಆ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಅಲ್ಲೂ ಗೆಲುವಿನ ಅವಕಾಶಗಳು ಇವೆ’ ಎಂದು ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಚಿವ ಸತೀಶ ಜಾರಕಿಹೊಳಿ, ಶಾಸಕ ಲಕ್ಷ್ಮಣ ಸವದಿ ಮತ್ತು ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

 


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ