Breaking News
Home / ರಾಜಕೀಯ / ಕೋಟ ಶ್ರೀನಿವಾಸ್ ಗೆ ಹಿಂದಿ, ಇಂಗ್ಲಿಷ್ ಬರಲ್ಲ, ಅವರನ್ನ ಗೆಲ್ಲಿಸಿದ್ರೆ ದಿಲ್ಲಿಯಲ್ಲಿ ಕೆಲಸಗಳಾಗಲ್ಲ: ಜಯಪ್ರಕಾಶ್ ಹೆಗ್ಡೆ

ಕೋಟ ಶ್ರೀನಿವಾಸ್ ಗೆ ಹಿಂದಿ, ಇಂಗ್ಲಿಷ್ ಬರಲ್ಲ, ಅವರನ್ನ ಗೆಲ್ಲಿಸಿದ್ರೆ ದಿಲ್ಲಿಯಲ್ಲಿ ಕೆಲಸಗಳಾಗಲ್ಲ: ಜಯಪ್ರಕಾಶ್ ಹೆಗ್ಡೆ

Spread the love

ಡುಪಿ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಗೆ (Kota srinivas poojary) ಕನ್ನಡ ಬಿಟ್ಟರೇ ಹಿಂದಿ ಅಥವಾ ಇಂಗ್ಲೀಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ (Delhi) ಕೆಲಸಗಳಾಗುವುದಿಲ್ಲ ಎಂದು ಜಯಪ್ರಕಾಶ್ ಹೆಗ್ಡೆ (Jayaprakash Hegde) ಹೇಳಿದ್ದಾರೆ.

 

ಉಡುಪಿ-ಚಿಕ್ಕಮಗಳೂರು (Udupi-Chikkamagalur) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ (BJP) ತನ್ನ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ್ ಪೂಜಾರಿ ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕೆ ಇಳಿದಿದ್ದಾರೆ. ಈ ಹಿನ್ನೆಲೆ ಬ್ರಹ್ಮಾವರದ (Brahmavara) ಚುನಾವಣಾ ಸಭೆಯಲ್ಲಿ ಮಾತನಾಡಿದ ಜಯಪ್ರಕಾಶ್ ಹೆಗ್ಡೆ, ಕೋಟ ಶ್ರೀನಿವಾಸ್ ಪೂಜಾರಿಗೆ ಕನ್ನಡ ಬಿಟ್ಟರೇ ಹಿಂದಿ ಅಥವಾ ಇಂಗ್ಲೀಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ.

JAYAPRAKASH HEGDE: ಕೋಟ ಶ್ರೀನಿವಾಸ್ ಗೆ ಹಿಂದಿ, ಇಂಗ್ಲಿಷ್ ಬರಲ್ಲ, ಅವರನ್ನ ಗೆಲ್ಲಿಸಿದ್ರೆ ದಿಲ್ಲಿಯಲ್ಲಿ ಕೆಲಸಗಳಾಗಲ್ಲ: ಜಯಪ್ರಕಾಶ್ ಹೆಗ್ಡೆ

ಸಂಸದರಾದವರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆ ವೈಯಕ್ತಿಕವಾಗಿ ಮಾತನಾಡಬೇಕಾಗುತ್ತದೆ. ಹಿಂದಿ ಅಥವಾ ಇಂಗ್ಲಿಷ್ ಬರದೇ ಲೋಕಸಭೆಯಲ್ಲಿ ವ್ಯವಹಾರ ಕಷ್ಟ ಸಾಧ್ಯ. ಕಚೇರಿ ವ್ಯವಹಾರಗಳಲ್ಲಿ ಸಮಸ್ಯೆಯಾಗುತ್ತದೆ. ಭಾಷಾಂತರಕಾರರಿಗೆ ಅವಕಾಶ ಇರಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಅಲ್ಲದೆ, ಲೋಕಸಭೆಯಲ್ಲಿ ಈ ಹಿಂದೆ ನಾನು ಕನ್ನಡದಲ್ಲಿ ಭಾಷಣ ಮಾಡುತ್ತೇನೆ ಎಂದು ಹೇಳಿದ್ದೆ. ಆಗ ನಿಮ್ಮ ಕನ್ನಡ ಭಾಷಣವನ್ನು ಯಾರು ಕೇಳುವುದಿಲ್ಲ, ಹಿಂದಿ ಅಥವಾ ಇಂಗ್ಲಿಷಿನಲ್ಲಿ ಮಾತನಾಡಿದರೆ ಸಂಸದರು ಕೇಳುತ್ತಾರೆ ಎಂದು ಹೇಳಿದ್ದರು ಎಂದು ಹೆಗ್ಡೆ ತಮಗಾಗಿದ್ದ ಅನುಭವವನ್ನು ಹೇಳಿಕೊಂಡರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ