Breaking News

ರಾಜ್ಯದಲ್ಲಿ ಕಾಂಗ್ರೆಸ್ ಒಂದು ಕ್ಷೇತ್ರದಲ್ಲೂ ಕೂಡ ಗೆಲ್ಲಲ್ಲ : ವಿಜಯೇಂದ್ರ

Spread the love

ಬೆಂಗಳೂರು,ಮಾ.23- ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ರಾಜ್ಯದ ಯಾವುದೇ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

 

ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ. ಮೋದಿ ಜನಪ್ರಿಯತೆ ಮುಂದೆ ಈ ಬಾರಿ ಯಾವ ರಾಜಕೀಯ ಪಕ್ಷಗಳ ಆಟಗಳು ನಡೆಯುವುದಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಒಂದು ಕ್ಷೇತ್ರದಲ್ಲೂ ಕೂಡ ಗೆಲ್ಲಲ್ಲ : ವಿಜಯೇಂದ್ರ ಭವಿಷ್ಯ

ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಪರಿವರ್ತಿಸುವ ಸಂಕಲ್ಪದೊಂದಿಗೆ ಕೇಂದ್ರದ ಮೋದಿಯವರ ನೇತೃತ್ವದ ಸರಕಾರ ಜನಪರ ಯೋಜನೆಗಳನ್ನು ನೀಡಿದೆ. ಹಾಗಾಗಿ ಮೋದಿ ಮತ್ತೊಮ್ಮೆ ಎಂಬ ಘೋಷಣೆ ದೇಶಾದ್ಯಂತ ಕೇಳಿಸುತ್ತಿದೆ ಎಂದು ತಿಳಿಸಿದರು.

ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂಬುದನ್ನು ನಾವು ಮತ್ತೆ ಸಾಬೀತು ಮಾಡಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ನಿಷ್ಕ್ರಿಯವಾಗಿದೆ. ಅದು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಎಚ್ಚತ್ತುಕೊಳ್ಳದೆ ಇರುವುದು ನಿಜಕ್ಕೂ ದುರಂತವೇ ಸರಿ ಎಂದರು.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ