Breaking News
Home / ರಾಜಕೀಯ / ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ

ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ

Spread the love

ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾ.23- ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾಗದೆ, 90ಕ್ಕೂ ಹೆಚ್ಚು ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ, ಗೂಟದ ಕಾರು ನೀಡಿ ಅವರನ್ನು ಸಮಾಧಾನಪಡಿಸಬೇಕಾದ ದಯನೀಯ ಸ್ಥಿತಿ ನಿಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಅವರು, ತಾವು ಎಷ್ಟು ದುರ್ಬಲ ಮುಖ್ಯಮಂತ್ರಿ ಎಂದರೆ ಶಾಸಕರನ್ನು ಹಿಡಿತದಲ್ಲಿಡದೆ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅವರನ್ನು ಸಮಾಧಾನಪಡಿಸಬೇಕಾದ ದಯಾನೀಯ ಸ್ಥಿತಿಯಲ್ಲಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.

2013-18ರಲ್ಲಿ ತಾವು ಕೊಟ್ಟ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ ಎಂದು ಹೇಳಿದ್ದೀರಿ. ಅಸಲಿಗೆ ನಿಮ್ಮ ಪ್ರಣಾಳಿಕೆಯಲ್ಲಿದ್ದ ಘೋಷಣೆಗಳು 165 ಅಲ್ಲ 173. ಅದರಲ್ಲಿ ಐದು ವರ್ಷಗಳಲ್ಲಿ ತಾವು ಈಡೇರಿಸಿದ್ದು ಕೇವಲ ಶೇ.38, ಅಂದರೆ 67 ಮಾತ ಎಂದು ಟೀಕಿಸಿದ್ದಾರೆ.

ಇನ್ನು ಕಳೆದ 10 ತಿಂಗಳುಗಳಲ್ಲಿ ತಮ್ಮ ಸಾಧನೆ ದೊಡ್ಡ ಶೂನ್ಯ. ಗ್ಯಾರೆಂಟಿಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ರಾಜ್ಯವನ್ನ 1 ಲಕ್ಷ ಕೋಟಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದು, ಕೊರೋನಾದಂತಹ ಪರಿಸ್ಥಿತಿಯಲ್ಲೂ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ನಂಬರ್ 1 ಸ್ಥಾನದಲ್ಲಿದ್ದ ಕರ್ನಾಟಕವನ್ನ 4ನೇ ಸ್ಥಾನಕ್ಕೆ ಇಳಿಸಿದ್ದೇ ನಿಮ್ಮ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.

ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ : ಆರ್.ಅಶೋಕ್ ವ್ಯಂಗ್ಯ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಮೀಸಲಿರಬೇಕಾಗಿದ್ದ 11,000 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳ ಹೆಸರಿನಲ್ಲಿ ಗುಳುಂ ಮಾಡಿದ್ದೇ ನಿಮ್ಮ ಸಾಧನೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲು, ಬೆಂಗಳೂರಲ್ಲಿ ಬಾಂಬ್ ಸ್ಪೋಟ ಆಗಲು ಬಿಟ್ಟಿದ್ದೇ ನಿಮ್ಮ ಸಾಧನೆ ಎಂದು ಮೂದಲಿಸಿದ್ದಾರೆ.

ರೈತರಿಗೆ ಬರ ಪರಿಹಾರ ಕೊಡದೆ 900ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ತಂದಿದ್ದು, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಗುಳೆ ಹೋಗುವಂತೆ ಮಾಡಿದ್ದು, ಬೆಂಗಳೂರಿನ ಜನರು ಕುಡಿಯುವ ನೀರಿಗೂ ಪರದಾಡುವ ದುಸ್ಥಿತಿ ತಂದು ಇತಿಹಾಸದಲ್ಲೇ ಇದೆ ಮೊದಲ ಬಾರಿಗೆ ಜನ ಬೆಂಗಳೂರು ಬಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ನಿಮ್ಮ ಸಾಧನೆ ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ