Breaking News

ಶ್ರೀರಾಮ ಸರ್ವರಿಗೂ ಸೇರಿದವನು; ನನ್ನ ಹೆಸರಲ್ಲೇ ರಾಮನಿದ್ದಾನೆ;C.M.

Spread the love

ಚಾಮರಾಜನಗರ: ಇಂದು ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ‘ಕೈ’ಗೆ ಬರಲೇಬೇಕು, ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರ ಯಾವ ಕಾರಣಗಳೂ ಇಲ್ಲ’ ಎಂದರು.

‘ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ. ನಾವು ನಡೆಸಿರುವ ಹಲವು‌ ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ನುವ ವರದಿಗಳು ಬಂದಿವೆ. ಹೀಗಾಗಿ‌ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ’ ಎಂದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ