Breaking News

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನ

Spread the love

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನಾಗಿದ್ದು ಬಾಗಿಲು ಹಾಕಲು ಕ್ಷಣಗಣನೆ ಆರಂಭವಾಗಿದೆ.

ಇಂದು ಮಧ್ಯಾಹ್ನ 12:30ರ ನಂತರ ದೇವಾಲಯದ ಬಾಗಿಲು ಹಾಕಲಾಗುತ್ತೆ. ಬಾಗಿಲು ಹಾಕುವಾಗ ಹಚ್ಚಿಸಿಟ್ಟ ದೀಪ ಒಂದು ವರ್ಷದ ನಂತರ ಬಾಗಿಲು ತೆರೆದಾಗಲೂ ಬೆಳಗುತ್ತಿರುತ್ತದೆ. ದೇವರಿಗೆ ಮುಡಿಸಿದ ಹೂವು ವರ್ಷ ಕಳೆದರೂ ಬಾಡುವುದಿಲ್ಲ ಎಂಬ ನಂಬಿಕೆಯಿದೆ.

ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ಇರಲಿಲ್ಲ. ಹೀಗಾಗಿ ಬಹುತೇಕ ಭಕ್ತರು ಈ ವರ್ಷ ಹಾಸನಾಂಬೆ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಇದೇ ನವೆಂಬರ್ 5ರಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದಿದ್ದು ಇಂದು ಬಾಗಿಲನ್ನು ಹಾಕಲಾಗುತ್ತಿದೆ.


Spread the love

About Laxminews 24x7

Check Also

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Spread the love ಗದಗ, ಹಾಸನ: ಹವಾಮಾನ ಇಲಾಖೆ ಮುನ್ಸೂಚನೆ ನೀಡಿದಂತೆ ರಾಜ್ಯದ  ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಗದಗ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ