Breaking News

ಮೋದಿ.ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ

Spread the love

ಮೋದಿ…ಮೋದಿ ಎಂದು ಕೂಗಿದರೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಬಿಜೆಪಿ, ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

 

ಬೆಂಗಳೂರು, (ಮಾರ್ಚ್ 25): “ಯುವಕರು ಮೋದಿ.. ಮೋದಿ..

ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ್ ತಂಗಡಗಿ (Shivaraj tangadagi)ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದ್ದು, ನಾವು ಮೋದಿ ಮೋದಿ ಎನ್ನುತ್ತೇವೆ ನಮಗೆ ಹೊಡೆಯಿರಿ ಬನ್ನಿ ಎಂದು ಅಭಿಯಾನ ಮಾದರಿಯಲ್ಲಿ ಪೋಸ್ಟರ್​ ಅನ್ನು ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಇದೀಗ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಒಳಗೊಂಡ ಬಿಜೆಪಿ ನಿಯೋಗ ಇಂದು(ಮಾರ್ಚ್ 25) ಚುನಾವಣೆ ಆಯೋಗಕ್ಕೆ ದೂರು ನೀಡಿದರು.


Spread the love

About Laxminews 24x7

Check Also

ಬಾನು ಮುಷ್ತಾಕ್ ಆಯ್ಕೆಯನ್ನು ಧರ್ಮಾಂದರು ಮಾತ್ರ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

Spread the loveಮೈಸೂರು: “ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರು ಕುಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ