Breaking News

ಎಸ್‌ಎಸ್‌ಎಲ್​ಸಿ ಪರೀಕ್ಷೆ: ಮೊದಲ ಪರೀಕ್ಷೆ ದಿನವೇ ರಾಜ್ಯದಲ್ಲಿ ಮೂವರು ವಿದ್ಯಾರ್ಥಿಗಳು ಸಾವು

Spread the love

ತುಮಕೂರು, (ಮಾರ್ಚ್ 25): ಎಸ್‌ಎಸ್‌ಎಲ್​ಸಿ ಪರೀಕ್ಷೆ (SSLC Exam) ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ(Student) ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಮೋಹನ್ ಕುಮಾರ್ ಸಿ.ಎಸ್ (16) ಮೃತ ವಿದ್ಯಾರ್ಥಿ. ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್ ಸಿ.ಎಸ್ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಮೋಹನ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ, ದುರದೃಷ್ಟವಶಾತ್ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಎಸ್‌ಎಸ್‌ಎಲ್​ಸಿ ಪರೀಕ್ಷೆ:  ಮೊದಲ ಪರೀಕ್ಷೆ ದಿನವೇ ರಾಜ್ಯದಲ್ಲಿ ಮೂವರು ವಿದ್ಯಾರ್ಥಿಗಳು ಸಾವು

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್ , ತುರುವೇಕೆರೆ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿಯಿರುವ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯಲ್ಲಿ 10 ತರಗತಿ ಓದುತ್ತಿದ್ದ.ಇಂದು ಎಸ್‌ಎಸ್‌ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ತುರುವೇಕೆರೆ ಪಟ್ಟಣದ ಸರಸ್ವತಿ ಬಾಲಕರ ಪ್ರೌಢ ಶಾಲೆಗೆ ಬಂದಿದ್ದಾನೆ. ಆದ್ರೆ, ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದ್ದು, ಬಳಿಕ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯವಂತೆ ವೈದ್ಯರು ಸೂಚಿಸಿದ್ದಾರೆ. ಅದರಂತೆ
ಅಂಬ್ಯುಲೆನ್ಸ್​ನಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ, ಗುಬ್ಬಿ ಸಮೀಪ ಕೊನೆಯುಸಿರೆಳೆದಿದ್ದಾನೆ.


Spread the love

About Laxminews 24x7

Check Also

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

Spread the loveಕೊಪ್ಪಳ, ನವೆಂಬರ್​ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ