Breaking News

ಬಿಜೆಪಿಯಲ್ಲಿ ಯಾವುದೆ ತತ್ವ ಸಿದ್ಧಾಂತ ಉಳಿದಿಲ್ಲ.:ಲಕ್ಷ್ಮಣ ಸವದಿ

Spread the love

ಬೆಳಗಾವಿ: ಬಿಜೆಪಿಯಲ್ಲಿ ಯಾವುದೆ ತತ್ವ ಸಿದ್ಧಾಂತ ಉಳಿದಿಲ್ಲ. ಯಾರು ಚಾರಿತ್ರ್ಯವಂತರು, ಯಾರು ಚಾರಿತ್ರ್ಯಹೀನರು ಎಂಬುವುದನ್ನು ಬಿಜೆಪಿ ನೋಡುತ್ತಿಲ್ಲ. ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಲು ಯಾರನ್ನು ಬೇಕಾದರೂ ಸೇರಿಸಿಕೊಳ್ಳುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದ್ದಾರೆ.

ಸೋಮವಾರ ಅಥಣಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳಿಗೆ ನಮ್ಮ ರಾಜ್ಯದಲ್ಲಿ ನೆಲೆ ಇಲ್ಲ ಎಂಬುದು ಜನಾರ್ದನ ರೆಡ್ಡಿಗೆ ಮನವರಿಕೆ ಆಗಿದೆ. ಆದುದರಿಂದ, ತಮ್ಮ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ದಡ ಸೇರಿಸಲು ಅವರು ಬಿಜೆಪಿ ಸೇರಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವಂತಹ ವಾತಾವರಣವಿದೆ. ಚಿಕ್ಕೋಡಿ ಹಾಗೂ ಬೆಳಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದ ಅವರು, ಬೆಳಗಾವಿಯಲ್ಲಿ ಹಾಲಿ ಸಂಸದೆ ಮಂಗಳಾ ಅಂಗಡಿಯವರಿಗೆ ಬಿಜೆಪಿ ಟಿಕೆಟ್ ತಪ್ಪಿಸುವ ಮೂಲಕ ಅವಮಾನ ಮಾಡಿದೆ ಎಂದು ಅವರು ಹೇಳಿದರು.

ಬೆಳಗಾವಿಯಲ್ಲಿ ಹಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದರೂ ಅವರಿಗೆ ಟಿಕೆಟ್ ಕೊಡದೆ, ಜಗದೀಶ್ ಶೆಟ್ಟರ್ ಅವರನ್ನು ಕರೆದು ಟಿಕೆಟ್ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್, ತುಮಕೂರಲ್ಲಿ ವಿ.ಸೋಮಣ್ಣ, ಕೊಪ್ಪಳದಲ್ಲಿ ಡಾ.ಬಸವರಾಜ್ ಕ್ಯಾವಟರ್ ಬಲಿ ಕಾ ಬಕ್ರಾ ಆಗುತ್ತಾರೆ ಎಂದು ಅವರು ಹೇಳಿದರು.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿಯೂ ಹಲವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಅಲ್ಲಿ ವಿ.ಸೋಮಣ್ಣ ಅವರಿಗೆ ಟಿಕೆಟ್ ಕೊಡಲಾಗಿದೆ. ಇದರಿಂದ ಹಲವು ಬಿಜೆಪಿ ನಾಯಕರು ಅಸಮಾಧಾನಗೊಂಡಿದ್ದಾರೆ. ಇದನ್ನು ಶಮನಗೊಳಿಸಲು ಯಡಿಯೂರಪ್ಪ ಹೋಗಿದ್ದರು ಎಂದು ಲಕ್ಷ್ಮಣ್ ಸವದಿ ತಿಳಿಸಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ