Breaking News
Home / ರಾಜಕೀಯ / ಡಿಕೆಶಿ ಮುಖ್ಯಮಂತ್ರಿ ಆಗಲೆಂದು ಅರ್ಚಕರ ಸಂಕಲ್ಪ

ಡಿಕೆಶಿ ಮುಖ್ಯಮಂತ್ರಿ ಆಗಲೆಂದು ಅರ್ಚಕರ ಸಂಕಲ್ಪ

Spread the love

ತ್ತರಕನ್ನಡ: ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

 

ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ದಳದವರು ಆರಂಭದಲ್ಲೇ ಎಡವಿದ್ದಾರೆ. ಆ ಪಕ್ಷದಲ್ಲಿ ಜಾತ್ಯಾತೀತ ತತ್ವ ಇಲ್ಲವಾಗಿದೆ. ಅಲ್ಲಿ ಪಕ್ಷದ ವಿಚಾರವೇ ಇಲ್ಲ. ಅವರ ಕುಟಂಬದ ಸದಸ್ಯರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸಿದ ಮೇಲೆ ಜೆಡಿಎಸ್ ಇದೆ ಎಂದು ಹೇಳಲು ಸಾಧ್ಯವೇ ಎಂದು ಗುಡುಗಿದರು.

ಬಿಜೆಪಿಯಲ್ಲಿ ಏನೆಲ್ಲಾ ನಡೆಯುತ್ತಿದೆ ಎಂದು ನಾನು ಹೇಳುವ ಅಗತ್ಯವಿಲ್ಲ. ಅಲ್ಲಿ ಪಕ್ಷದ ಮಾಜಿ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ಇಲ್ಲವಾಗಿದೆ. ಪಕ್ಷಕ್ಕೆ ಭದ್ರ ಬುನಾದಿ ಹಾಕಿದವರಿಗೆ, ರಾಜ್ಯ ಪ್ರವಾಸ ಮಾಡಿದವರಿಗೆ, ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಮನೆಗೆ ಕಳಿಸಿ ಹೊಸಬರನ್ನು ಕಣಕ್ಕಿಳಿಸಿದ್ದಾರೆ ಎಂದು ಲೇವಡಿ ಮಾಡಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ