Breaking News

ಬೈಕ್‌ನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 25 ಲಕ್ಷ ರೂ. ವಶ

Spread the love

ಬೆಂಗಳೂರು, – ಯಾವುದೇ ದಾಖಲೆಗಳಿಲ್ಲದೇ ದ್ವಿಚಕ್ರ ವಾಹನದಲ್ಲಿ ಸಾಗಿ ಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ನಿನ್ನೆ ಸಂಜೆ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ 2 ಬ್ಯಾಗ್ಗಳಲ್ಲಿ 25 ಲಕ್ಷ ಹಣವನ್ನು ಸಾಗಿಸುತ್ತಿದ್ದ ಮಾಹಿತಿ ಚುನಾವಣಾಧಿಕಾರಿಗಳಿಗೆ ಲಭಿಸಿದೆ.

 

ತಕ್ಷಣ ಸಿಸಿಬಿ ಪೊಲೀಸರೊಂದಿಗೆ ಚುನಾವಣಾಧಿಕಾರಿಗಳು ದಾಳಿ ಮಾಡಿ ಬ್ಯಾಗ್ಗಳನ್ನು ಪರಿಶೀಲಿಸಿದಾಗ ಅದರಲ್ಲಿ 25 ಲಕ್ಷ ರೂ. ಹಣ ಇರುವುದು ಕಂಡುಬಂದಿದೆ. ದ್ವಿಚಕ್ರ ವಾಹನ ಸವಾರ ಈ ಹಣಕ್ಕೆ ಯಾವುದೇ ದಾಖಲೆ ನೀಡದ ಕಾರಣ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹಣದ ಮೂಲದ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ಹಣ ಎಲ್ಲಿಂದ ಬಂತು, ಯಾರಿಗೆ ಸೇರಿದ್ದು, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.ಈ ಹಣ ವ್ಯಾಪಾರಿಯೊಬ್ಬರಿಗೆ ಸೇರಿದ್ದಾಗಿದೆ ಎಂಬುವುದು ಗೊತ್ತಾಗಿದ್ದು ತನಿಖೆ ಮುಂದುವರೆದಿದೆ. ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ