Breaking News

ಡಿ.ಕೆ.ಶಿವಕುಮಾರ್, ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ನಿಂಬಾಳ್ಕರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‌ಬುಕ್‌ ಪೇಜಿನಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆ, ಕಾಂಗ್ರೆಸ್‌ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ.ಸುರೇಶ್‌ ಪರವಾಗಿ ಚುನಾವಣಾ ಪ್ರಚಾರ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಹೇಮಂತ್‌ ನಿಂಬಾಳ್ಕರ್ ಅವರು ತಮ್ಮ ಪತ್ನಿ ಹಾಗೂ ಉತ್ತರಕನ್ನಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಪರವಾಗಿ ಮತ ನೀಡುವಂತೆ ಪ್ರಭಾವ ಬೀರುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ತಕ್ಷಣವೇ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಬೇಕು. ರಾಜ್ಯ ಒಳಗೇ ಇದ್ದರೆ ಮತ್ತೆ ತಮ್ಮ ಪ್ರಭಾವ ಬಳಸುವ ಸಾಧ್ಯತೆ ಇದ್ದು, ಅವರಿಗೆ ಕರ್ನಾಟಕದಿಂದ ಹೊರಗೆ ಕೆಲಸ ಮಾಡಲು ಅವಕಾಶ ಕೊಡಿ’ ಎಂದು ಮನವಿಯಲ್ಲಿ ಹೇಳಿದ್ದಾರೆ.

ಬಿಜೆಪಿ ನಿಯೋಗದಲ್ಲಿ ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಕಾನೂನು ಪ್ರಕೋಷ್ಠದ ವಿವೇಕ್ ರೆಡ್ಡಿ ಇದ್ದರು.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ