Breaking News

ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಭರಾಟೆ ಆರಂಭ

Spread the love

ಬೆಂಗಳೂರು : ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

 

ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ

ಉಡುಪಿ-ಚಿಕ್ಕಮಗಳೂರು

ಹಾಸನ

ದಕ್ಷಿಣ ಕನ್ನಡ

ಚಿತ್ರದುರ್ಗ

ತುಮಕೂರು

ಮಂಡ್ಯ

ಮೈಸೂರು

ಚಾಮರಾಜನಗರ

ಬೆಂಗಳೂರು ಗ್ರಾಮಾಂತರ

ಬೆಂಗಳೂರು ಉತ್ತರ

ಬೆಂಗಳೂರು ದಕ್ಷಿಣ

ಚಿಕ್ಕಬಳ್ಳಾಪುರ

ಕೋಲಾರ

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬಹುದಾಗಿದೆ. ಹಾಗೆಯೇ ವೋಟರ್ ಸಹಾಯವಾಣಿ 24*7 ಕಾರ್ಯನಿರ್ವಹಿಸಲಾಗುತ್ತದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ