ಬೆಂಗಳೂರು,ಮಾ.28- ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಯ ಪ್ರಮುಖ ರಾಷ್ಟ್ರೀಯ ನಾಯಕರು, ಪಕ್ಷದ ಅಭ್ಯರ್ಥಿಗಳ ಪರ ಕರ್ನಾಟಕದಲ್ಲಿ ಪ್ರಚಾರಕ್ಕೆ ಧುಮುಕಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಬಿಜೆಪಿ ನಾಯಕರು ಮುಂದಿನ ಕೆಲವು ವಾರಗಳಲ್ಲಿ ಕನಿಷ್ಠ ಪಕ್ಷ 2-3 ಬಾರಿ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
