Breaking News
Home / ರಾಜಕೀಯ / ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಮಹಿಳಾ ಸಂಸದೆ ಆಯ್ಕೆಯಾಗ್ತಾರಾ? ಇತಿಹಾಸ ಏನ್‌ ಹೇಳುತ್ತೆ?

ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಮಹಿಳಾ ಸಂಸದೆ ಆಯ್ಕೆಯಾಗ್ತಾರಾ? ಇತಿಹಾಸ ಏನ್‌ ಹೇಳುತ್ತೆ?

Spread the love

ಬೆಂಗಳೂರು, ಮಾರ್ಚ್‌ 28: ಕಳೆದ 73 ವರ್ಷಗಳಲ್ಲಿ 17 ಲೋಕಸಭಾ ಚುನಾವಣೆಗಳು ನಡೆದಿದ್ದರೂ ಬೆಂಗಳೂರಿನಲ್ಲಿ ಒಬ್ಬ ಮಹಿಳಾ ಸಂಸದರೂ ಆಯ್ಕೆಯಾಗಿಲ್ಲ. ಈ ಬಾರಿ ಬೆಂಗಳೂರು ವ್ಯಾಪ್ತಿಯ ಎರಡು ಕ್ಷೇತ್ರದಲ್ಲಿ ಪ್ರಬಲ ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಹೌದು, 18ನೇ ಚುನಾವಣೆ ನಡೆಯುತ್ತಿದ್ದು, ಬೆಂಗಳೂರಿನಿಂದ ಈವರೆಗೆ ಒಬ್ಬ ಸಂಸದೆಯೂ ಆಯ್ಕೆಯಾಗಿಲ್ಲ.

ಈ ಬಾರಿಯಾದರೂ ಬೆಂಗಳೂರಿನಿಂದ ಸಂಸತ್‌ಗೆ ಕಳಿಸುವ ಮೂಲಕ ಬೆಂಗಳೂರು ಹೊಸ ಇತಿಹಾಸ ಬರೆಯುವುದೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳಿದ್ದು, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಪ್ರಬಲ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ ಹಾಗೂ ಒಕ್ಕಲಿಗರ ಪ್ರಬಲ ನಾಯಕಿಯಾಗಿರುವ ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ.

2009 ರವರೆಗೆ ಎರಡು ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದ ಬೆಂಗಳೂರು, ನಂತರ ಮೂರು ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. ಈ ಬಾರಿ ಬಿಜೆಪಿ ಬೆಂಗಳೂರು ಉತ್ತರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕಿಳಿಸಿದ್ದು, ಬೆಂಗಳೂರು ದಕ್ಷಿಣಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ. ಐಟಿ ನಗರದ ಮತದಾರರು ಮೊದಲ ಬಾರಿಗೆ ಸಂಸದೆಯನ್ನು ಆಯ್ಕೆ ಮಾಡುತ್ತದೆಯೇ ಕಾದು ನೋಡಬೇಕಿದೆ.

ಬೆಂಗಳೂರು ಉತ್ತರದ ಹಾಲಿ ಸಂಸದರಾದ ಡಿ ವಿ ಸದಾನಂದಗೌಡರಿಗೆ ಈ ಬಾರಿ ಟಿಕೆಟ್‌ ಕೈ ತಪ್ಪಿದ್ದು, ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧಅಭ್ಯರ್ಥಿಯಾಗಿ ಪ್ರೊ.ರಾಜೀವ್‌ ಗೌಡ ಕಣಕ್ಕಿಳಿದಿದ್ದಾರೆ. ಎರಡು ಬಾರಿ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದು, ಗೋ ಬ್ಯಾಕ್‌ ಶೋಭಾಕ್ಕ ಅಭಿಯಾನವನ್ನ ನಡೆಸಿದ್ರು, ಇದರಿಂದಾಗಿ ಬಿಜೆಪಿಯ ಭದ್ರ ಕೋಟೆಯಾಗಿರುವ ಬೆಂಗಳೂರು ಉತ್ತರದಿಂದ ಶೋಭಾ ಅವರಿಗೆ ಟಿಕೆಟ್‌ ನೀಡಲಾಗಿದೆ.

ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಮಹಿಳಾ ಸಂಸದೆ ಆಯ್ಕೆಯಾಗ್ತಾರಾ? ಇತಿಹಾಸ ಏನ್‌ ಹೇಳುತ್ತೆ?

ಮಾಜಿ ಮೇಯರ್ ಮತ್ತು ಕಾಂಗ್ರೆಸ್ ನಾಯಕಿ ಗಂಗಾಂಬಿಕೆ ಮಲ್ಲಿಕಾರ್ಜುನ ಮಾತನಾಡಿ , ಇಂದಿರಾ ಗಾಂಧಿ ಅವರು ದೇಶದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿಯಾಗಿದ್ದರು. ಬಸವಣ್ಣ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳಾ ನಾಯಿಕತ್ವದ ಬಗ್ಗೆ ಒತ್ತಿ ಹೇಳಿದ್ದರು. ಆದರೆ, ರಾಜಕೀಯದಲ್ಲಿ ಮಹಿಳೆಯರಿಗೆ ಸರಿಯಾದ ಪ್ರಾತಿನಿಧ್ಯವಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಮಹಿಳೆ ಎಂಬ ಕಾರಣಕ್ಕೆ ಚಿಕ್ಕಪೇಟೆ ಕ್ಷೇತ್ರದಲ್ಲಿ ನನಗೆ ಟಿಕೆಟ್ ದೊರೆಯಲಿಲ್ಲ. ಲೋಕಸಭೆಯಲ್ಲಿ ಮಹಿಳೆಯರು ಬೆಂಗಳೂರನ್ನು ಪ್ರತಿನಿಧಿಸಬೇಕು ಎಂದರು.

ತಮ್ಮ ಸ್ವಂತ ಅನುಭವವನ್ನು ನೆನಪಿಸಿಕೊಂಡ ಗಂಗಾಂಬಿಕೆ, ಕಳೆದ ವರ್ಷ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೆ. ನಾನು ಬೆಂಗಳೂರು ಮೇಯರ್ ಆಗಿದ್ದೆ ಮತ್ತು ಪಕ್ಷದಲ್ಲಿ ಮಾತ್ರವಲ್ಲದೆ ವಿವಿಧ ಸಂಘಗಳು ಮತ್ತು ಸಂಸ್ಥೆಗಳಲ್ಲಿಯೂ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಮಹಿಳೆ ಎಂಬ ಕಾರಣಕ್ಕೆ ನನಗೆ ಚಿಕ್ಕಪೇಟೆ ಟಿಕೆಟ್ ನೀಡಿಲ್ಲ ಎಂದು ಗಂಗಾಂಬಿಕೆ ಮಲ್ಲಿಕಾರ್ಜುನಹೇಳಿದರು.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ