Breaking News

ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Spread the love

ಶಿರಸಿ: ಉತ್ತರ ಕನ್ನಡ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್‌ ಪ್ರಕಟವಾದ ಬೆನ್ನಲ್ಲೇ ಆರು ಬಾರಿ ಸಂಸದರಾಗಿದ್ದ ಅನಂತ ಕುಮಾರ ಹೆಗಡೆ “ತಟಸ್ಥ’ರಾಗಿ ಉಳಿಯಲಿದ್ದಾರೆ ಎನ್ನಲಾಗಿದೆ.
ಸಂವಿಧಾನ ತಿದ್ದುಪಡಿ  ಹೇಳಿಕೆ ಹಾಗೂ ಮುಸ್ಲಿಂ ವಿರೋಧಿ ನಿಲುವು ಅವರಿಗೆ ಈ ಬಾರಿ ಟಿಕೆಟ್‌ ತಪ್ಪಲು ಮೇಲ್ನೋಟಕ್ಕೆ ಕಾರಣ ಎಂದು ಪಕ್ಷದ ಕೆಲವು ಹಿರಿಯರು ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ.

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

ಹೀಗಾಗಿ ಪಕ್ಷಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಲು ಪ್ರಚಾರದಿಂದಲೂ ದೂರವುಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ಕಾಗೇರಿ ಬೆಂಬಲಿಗರು ಅನಂತ್‌ ಭೇಟಿಗೆ ಯತ್ನಿಸಿದಾಗ “ನಾಳೆ- ನಾಡಿದ್ದು ನೋಡೋಣ’ ಎಂದು ಹೇಳಿ ಕಳುಹಿಸಿ ದ್ದಾರೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಅವರನ್ನು ಭೇಟಿ ಮಾಡಲು ತೆರಳಿ ಮನೆಬಾಗಿಲ ಬಳಿ ಕಾದು ಕಾಗೇರಿ ವಾಪಸ್‌ ಆಗಿದ್ದಾರೆ ಎಂಬ ವಿಷಯವೂ ಕೇಳಿಬಂದಿದೆ. ಆದರೆ ಸಂಸದರ ಮನೆಯ ಬಳಿ ಜನರಿದ್ದ ಕಾರಣ ಕಾಗೇರಿ ಒಳಗೆ ಹೋಗಿಲ್ಲ ಎನ್ನಲಾಗಿದೆ. ಈ ಎಲ್ಲ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸಂಸದ ಹೆಗಡೆ ಚುನಾವಣೆಯಿಂದ ದೂರ ಉಳಿಯುತ್ತಾರೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ