ಚೆನ್ನೈ: ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡ್ಯಾನಿಯಲ್ ಹೃದಯಾಘಾತದಿಂದ ಶನಿವಾರ (ಮಾರ್ಚ್ 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು.
ಮಾರ್ಚ್ 29ರಂದು ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದ ಕಾರಣ ಶನಿವಾರ (ಮಾರ್ಚ್ 30) ಅವರು ಕೊನೆಯುಸಿರು ಎಳೆದಿದ್ದಾರೆ. ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Laxmi News 24×7