Breaking News

ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

Spread the love

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಕೆ.ವಿ ಗೌತಮ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ.

ಇದರೊಂದಿಗೆ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎನ್ನುವುದು ಕೋಲಾರ ವಿಚಾರದಲ್ಲಿ ನಿಜವಾಗಿದೆ.

Loksabha Election; ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

ಕರ್ನಾಟಕದಿಂದ ಲೋಕಸಭೆಗೆ ಬಾಕಿಯಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಶುಕ್ರವಾರವೇ ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ ಕೋಲಾರವೇ ಕಗ್ಗಂಟಾಗಿತ್ತು.

ಪರಿಶಿಷ್ಟ ಜಾತಿ ಎಡಗೈ ಸಮುದಾಯಕ್ಕೆ ಸೇರಿದ ಮಾಜಿ ಮೇಯರ್‌ ವಿಜಯಕುಮಾರ್‌ ಪುತ್ರ ಗೌತಮ್‌ ಅವರಿಗೆ ಕೋಲಾರ ಟಿಕೆಟ್ ಸಿಕ್ಕಿದೆ. ಇಂದು ಅಧಿಕೃತವಾಗಿ ಘೋಷಣೆಯಾಗಿದೆ.

ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಮಾಜಿ ಸಚಿವ ಕೆ.ಆರ್ ರಮೇಶ್ ಕುಮಾರ್ ಬಣಗಳ ನಡುವಿನ ಹಗ್ಗಜಗ್ಗಾಟಕ್ಕೆ ಕಾಂಗ್ರೆಸ್ ಈ ಮೂಲಕ ಉತ್ತರ ಕಂಡುಕೊಂಡಿದೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ