ಹಾವೇರಿ: ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದು ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ಟಿಕೆಟ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ.
ಅದರಲ್ಲೇನು ಆಶ್ವರ್ಯವಿಲ್ಲ. ಆದರೆ ಈ ಬಾರಿ ಇಷ್ಟು ಪ್ರಮಾಣದಲ್ಲಿ ಕುಟುಂಬ ರಾಜಕೀಯ ನಡೆಯಲು ಕಾರಣ ಬೇರೆಯೇ ಇದೆ. ಕಾಂಗ್ರೆಸ್ ನಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮಂತ್ರಿಗಳಿಗೆ ಸ್ಪರ್ಧಿಸಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು. ಆದರೆ ಅವರಿಗೆ ಆರಿಸಿ ಬರುವ ವಿಶ್ವಾಸವಿರಲಿಲ್ಲ. ಹಾಗಾದರೆ ನೀವೇ ಕ್ಯಾಂಡಿಡೇಟ್ ಕೊಡಿ ಎಂದಾಗ ಅನಿವಾರ್ಯವಾಗಿ ಅವರು ತಮ್ಮ ಮಕ್ಕಳು, ಅಣ್ಣ ತಮ್ಮಂದಿರಿಗೆ ಟಿಕೆಟ್ ಕೊಡಿಸಿದ್ದಾರೆ. ಇದರಿಂದ ರಾಜಕೀಯ ಲಾಭ ಆಗಲ್ಲ. ಮೋದಿಗೆ ಮತ ಹಾಕಲು ಜನ ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ನವರಿಗೆ ಅನುಕೂಲವಾಗದು ಎಂದು ಹೇಳಿದರು.