ಚಿತ್ರದುರ್ಗ: ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ಆರೋಪದಲ್ಲಿ ನಾಲ್ವರು ಸಹ ಶಿಕ್ಷಕರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಚಳ್ಳಕೆರೆ ತಾಲೂಕು ಪರಶುರಾಂಪುರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಳ್ಳಕೆರೆ ತಾಲೂಕು ಪಿ.ಈಬನಹಳ್ಳಿ ಶಾಲೆಯ ಚಂದ್ರಶೇಖರ್, ಕೊರ್ಲಕುಂಟೆ ಶಾಲೆಯ ಪ್ರಕಾಶ್, ಗೋಸಿಕೆರೆ ರಾಧಾಕೃಷ್ಣ ಶಾಲೆಯ ರಾಘವೇಂದ್ರ ಹಾಗೂ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ರೇವಣ್ಣ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ.
ಮೂರು ಕೊಠಡಿಗಳಲ್ಲಿ 18 ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಶಿಕ್ಷಕರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.
Laxmi News 24×7