Breaking News

ಪಕ್ಷಾಂತರಿಗಳಿಗೆ ಕಡಿವಾಣ ಹಾಕದಿದ್ದರೆ ರಾಜಕೀಯ ಶುದ್ಧೀಕರಣ ಅಸಾಧ್ಯ: ಸಿರಿಗೆರೆ ಶ್ರೀ

Spread the love

ಚಿತ್ರದುರ್ಗ: ಪಕ್ಷಾಂತರಗಳಿಗೆ ಕಡಿವಾಣ ಹಾಕದಿದ್ದರೆ ರಾಜಕೀಯ ಶುದ್ಧೀಕರಣ ಅಸಾಧ್ಯ. ಕಾರ್ಯಕರ್ತರ ಅಸಮಾಧಾನ ಹೆಚ್ಚಾಗುತ್ತದೆ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ತಮ್ಮನ್ನು ಭೇಟಿಯಾದ ಸಂದರ್ಭದಲ್ಲಿ ಸದ್ಧರ್ಮ ನ್ಯಾಯ ಪೀಠದಲ್ಲಿ ಮಾತನಾಡಿದ ಶ್ರೀಗಳು, ಪಕ್ಷಾಂತರಗಳಿಗೆ ಕಡಿವಾಣ ಬೀಳದೆ ರಾಜಕೀಯ ಶುದ್ಧೀಕರಣ ಮರೀಚಿಕೆಯಾಗಿದೆ ಎಂದು ಹೇಳಿದ್ದಾರೆ.

ರಾಜಕೀಯ ಶುದ್ಧೀಕರಣ ಇಂದಿನ ಅಗತ್ಯವಾಗಿದೆ. ಇದಕ್ಕೆ ಬದ್ಧವಾಗಿರಲು ರಾಜಕಾರಣಿಗಳು ಮುಂದಾಗಬೇಕು. ಪಕ್ಷಾಂತರ ನಿಷೇಧ ಕಾಯ್ದೆ ಮಾರ್ಪಾಡು ಅಗತ್ಯವಾಗಿದೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವ ವ್ಯಕ್ತಿ ಕೊನೆ ಪಕ್ಷ ಐದು ವರ್ಷ ಹೊಸ ಪಕ್ಷದಲ್ಲಿ ಸದಸ್ಯನಾಗಿರಬೇಕು, ಆತನಿಗೆ ಯಾವುದೇ ಅಧಿಕಾರ ದೊರೆಯಬಾರದು. ಹೀಗೆ ನಿಯಮ ರೂಪಿಸಿದರೆ ರಾಜಕಾರಣ ಒಂದಿಷ್ಟು ಹಿಡಿತಕ್ಕೆ ಬರುತ್ತದೆ. ರೆಸಾರ್ಟ್ ರಾಜಕಾರಣವೂ ಕೊನೆಯಾಗುತ್ತದೆ ಎಂದು ಹೇಳಿದ್ದಾರೆ.

ದಶಕಗಳ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಾತೀತ ಮತ್ತು ಜಾತ್ಯತೀತ ರಾಜಕೀಯ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂತಿಂತಹ ಅಭ್ಯರ್ಥಿಗಳಿಗೆ ಮತ ಹಾಕಲು ಮನವಿ ಮಾಡಿದ್ದೆವು. ಆ ಪ್ರಯೋಗ ಯಶಸ್ವಿಯಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದು ಬಂದ ಅಭ್ಯರ್ಥಿಗಳು ಜನರ ಆಶೋತ್ತರಗಳಿಗೆ ಸ್ಪಂದಿಸಲಿಲ್ಲ ಎಂದು ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

Spread the love ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ