Breaking News

ಕರಾವಳಿಯಲ್ಲಿ ಜೀವ ಹಿಂಡುವ ಬಿಸಿಲಿನ ತಾಪ! ಸುಡು ಬಿಸಿಲಿನಿಂದ ಪಾರಾಗಲು ಮನೆ ಮೇಲೆ ಸ್ಪ್ರಿಂಕ್ಲರ್ ಅಳವಡಿಕೆ!

Spread the love

ಮಂಗಳೂರು: ಕರ್ನಾಟಕದಲ್ಲಿ (Karnataka Weather) ಕಳೆದ ಕೆಲ ವಾರಗಳಿಂದ ಒಂದೇ ಸಮನೆ ರೌದ್ರಾವತಾರ ತೋರುತ್ತಿರುವ ಬಿಸಲು ಜನರ ನೆತ್ತಿ ಸುಡುತ್ತಿದೆ. ಸುಡುವ ಬಿಸಿಲಿಗೆ ಬೆದರಿ ಜನರು ಮನೆಯಿಂದ ಹೊರ ಬರೋಕೆ ಹೆದರುತ್ತಿದ್ದು, ಹವಾಮಾನ ಇಲಾಖೆ ಕೂಡ ಬಿಸಿಲಿನಿಂದ (Temperature Rise) ಪಾರಾಗಲು ಜನರು ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

ಇನ್ನು ಕಡಲ ನಗರಿ ಮಂಗಳೂರಿನಲ್ಲೂ ಬಿಸಿಲಿನ ತಾಪ ಏರಿದ್ದು, 35° ಸರಾಸರಿಯಲ್ಲಿ ಕರಾವಳಿ ಭಾಗದಲ್ಲಿ ಈ ಬಾರಿಯ ಮಾರ್ಚ್‌ನಲ್ಲಿ ತಾಪಮಾನ ದಾಖಲಾಗಿದೆ. ಬಿಸಿಲಿನ ತಾಪ ಏರಿದ್ದರಿಂದ ಮನೆಯೊಳಗೆ ಹಗಲು ಹೊತ್ತು ಕೂರದಂತಹ ಸ್ಥಿತಿ ತುಳುನಾಡಿನಲ್ಲಿ ನಿರ್ಮಾಣವಾಗಿದ್ದು, ಜನರು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ. ಈತನ್ಮಧ್ಯೆ ಪುತ್ತೂರಿನ ಪರ್ಲಡ್ಕ ಸಮೀಪ ಮನೆಯೊಂದರಲ್ಲಿ ಹಂಚಿನ ಮನೆಯ ಮೇಲೆ ಸ್ಪ್ರಿಂಕ್ಲರ್ ಮೂಲಕ ನೀರು ಹಾಕಿ ತಾಪಮಾನದಿಂದ ಪಾರಾಗಲು ಪ್ರಯತ್ನ ಪಟ್ಟಿದ್ದಾರೆ.

ಮನೆಯ ಮೇಲೆ ಸ್ಪ್ರಿಂಕ್ಲರ್ ಹಾಕಿ ನೀರು ಸಿಂಪಡಿಸುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರಿಂದ ಜನರು ಯಾವ ಮಟ್ಟಿಗೆ ಬಿಸಿಲಿನ ಬೇಗೆಯಿಂದ ಬಳಲುತ್ತಿರಬಹುದು ಎಂದು ಅಂದಾಜಿಸಲಾಗಿದೆ. ಪುತ್ತೂರಿನಲ್ಲಿ 41 ಡಿಗ್ರಿ ಸೆಲ್ಸಿಯಸ್ ನವರೆಗೆ ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಏರಿಕೆಯಾಗಿದ್ದು, ಸುಡುವ ಬಿಸಿಲಿನಿಂದ ಪಾರಾಗಲು ಜನರು ಮಧ್ಯಾಹ್ನ ವೇಳೆಗೆ ಮನೆಯಿಂದ ಹೊರಗೆ ಬಾರದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ