ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆ.ಜಿ ವಾಣಿಜ್ಯ ಸಿಲಿಂಡರ್ ಮತ್ತು 5 ಕೆ.ಜಿ ಎಫ್‌ಟಿಎಲ್ (Free Trade LPG) ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿವೆ ಎಂದು ಮೂಲಗಳು ತಿಳಿಸಿವೆ.
19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗೆ ₹ 30.50 ಇಳಿಕೆಯಾಗಿದ್ದು, 5 ಕೆ.ಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ ₹7.50 ಇಳಿಕೆಯಾಗಿದೆ.ಪರಿಷ್ಕೃತ ದರಗಳು ಏಪ್ರಿಲ್ 1ರಿಂದ ಅನ್ವಯವಾಗಲಿದೆ. ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ ₹ 1764.50 ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಗೃಹಬಳಕೆಯ 14 ಕೆ.ಜಿ ಯ ಸಿಲಿಂಡರ್‌ಗಳ ಬೆಲೆಯನ್ನು ₹100 ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದು ಮಹಿಳಾ ದಿನಾಚರಣೆಯ ಉಡುಗೊರೆಯೂ ಆಗಲಿದೆ ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದರು.
‘ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ಇದು ಗಮನಾರ್ಹವಾಗಿ ತಗ್ಗಿಸಲಿದೆ ಮತ್ತು ನಾರಿ ಶಕ್ತಿಗೆ ಪ್ರಯೋಜನವಾಗಲಿದೆ’ ಎಂದು ಅವರು ಹೇಳಿದ್ದರು.
Laxmi News 24×7