ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ಸಮರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಳಿದಿದ್ದಾರೆ. ಮೈಸೂರು-ಕೊಡಗು, ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲೇ ಬೇಕು ಅಂತ ಪಣ ತೊಟ್ಟಿರುವಂತ ಅವರು, ಇಂದಿನಿಂದ ಮೂರು ದಿನ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಬೆಳಿಗ್ಗೆ 10.15ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳಲಿದ್ದಾರೆ. 10.40ಕ್ಕೆ ಮೈಸೂರು ವಿಮಾನ ನಿಲ್ದಾಣ ತಲುಪಲಿರುವಂತ ಅವರು ಅಲ್ಲಿಂದ ರಸ್ತೆ ಮೂಲಕ ನಂಜನಗೂಡು ತಾಲೂಕಿನ ಬಿಳಿಗೆರೆಗೆ 11 ಗಂಟೆಗೆ ತಲುಪಲಿದ್ದಾರೆ.
ಬಿಳಿಗೆರೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ನಡೆಸಲಿದ್ದಾರೆ. ಆ ನಂತ್ರ ತಿ.ನರಸೀಪುರದಲ್ಲಿ ಮಧ್ಯಾನ್ನ.3 ಗಂಟೆಗೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಮೈಸೂರಿನ ಬಿಷಪ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದು, ಮೈಸೂರಲ್ಲೇ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್.2ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಂಕರಮಠಕ್ಕೆ ಭೇಟಿ ನೀಡಲಿದ್ದಾರೆ. 11 ಗಂಟೆಗೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ನಡೆಸಲಿದ್ದಾರೆ.
ಮೈಸೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲೂ ಸಿಎಂ ಸಿದ್ಧರಾಮಯ್ಯ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಸಭೆಯನ್ನು ಮೈಸೂರಿನ ಫಾರ್ಚೂನ್ ಜೆಪಿ ಪ್ಯಾಲೆಸ್, ನಜರಾಬಾದ್ ನಲ್ಲಿ ನಡೆಸಲಿದ್ದಾರೆ.
ಏಪ್ರಿಲ್ 3ರಂದು ಮೈಸೂರಿನ ಸುತ್ತೂರು ಮಠಕ್ಕೆ ಸಿಎಂ ಸಿದ್ಧರಾಮಯ್ಯ ಬೆಳಿಗ್ಗೆ 9.30ಕ್ಕೆ ಭೇಟಿ ನೀಡಲಿದ್ದಾರೆ. ಮೈಸೂರು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 10.15ಕ್ಕೆ ಹೆಲಿಕಾಪ್ಟರ್ ಮೂಲಕ ಚಾಮರಾಜನಗರದ ಡಾ.ಬಿಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಲಿದ್ದಾರೆ. ಬೆಳಿಗ್ಗೆ 11ಗಂಟೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.