Breaking News

ಪಕ್ಷೇತರ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟ ವೀಣಾ ಕಾಶಪ್ಪನವರ್‌

Spread the love

ಬಾಗಲಕೋಟೆ, ಏಪ್ರಿಲ್‌ 01: ಲೋಕಸಭಾ ಅಭ್ಯರ್ಥಿಗಳು ಅಂತಿಮವಾಗುತ್ತಿದ್ದಂತೆ ಎಲ್ಲಾ ಪಕ್ಷಗಳಲ್ಲಿಯೂ ಅಸಮಾಧಾನ ಹೊಗೆಯಾಡುತ್ತಿದೆ. ಈ ಬಾರಿ ಪ್ರಬಲ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ಅನೇಕರಿಗೆ ಟಿಕೆಟ್‌ ಕೈ ತಪ್ಪಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

ಇದೀಗ ಕಾಂಗ್ರೆಸ್‌ಗೂ ಬಂಡಾಯದ ಬಿಸಿ ತಟ್ಟುತ್ತಿದ್ದು, ಟಿಕೆಟ್‌ ವಂಚಿತೆ ವೀಣಾ ಕಾಶಪ್ಪನವರ್‌ ಬೆಂಬಲಿಗರ ಸಭೆ ಕರೆದಿರುವುದು ರಾಜ್ಯ ಕಾಂಗ್ರೆಸ್‌ ನಾಯಕರ ಆತಂಕಕ್ಕೆ ಕಾರಣವಾಗಿದೆ.

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಾಂಗ್ರೆಸ್‌ ಕಣಕ್ಕಿಳಿಸಿದ್ದು, ಸಚಿವರ ಪುತ್ರಿ ಸ್ಪರ್ಧೆಗಿಳಿದಿದ್ದಾರೆ. ಕ್ಷೇತ್ರದಿಂದ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್‌ಗೆ ಕೈ ತಪ್ಪಿದ ಟಿಕೆಟ್‌ ಸಚಿವ ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತಾ ಪಾಟೀಲ್‌ ಅವರ ಪಾಲಾಗಿತ್ತು.

ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಸಕ್ರಿಯರಾಗಿದ್ದ ವೀಣಾ ಕಾಶಪ್ಪನವರ್ ಇನ್ನು ಎರಡು ದಿನಗಳಲ್ಲಿ ಬಾಗಲಕೋಟೆಯ ಜಿಲ್ಲಾ ಕೇಂದ್ರದಲ್ಲಿ ಬೆಂಬಲಿಗರ ಸಭೆ ನಡೆಸಲಿದ್ದು, ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಲಿದ್ದಾರೆ. ವೀಣಾ ಕಾಶಪ್ಪನವರ್‌ ಅವರಿಗೆ ಟಿಕೆಟ್‌ ಕೈ ತಪ್ಪಿರುವ ವಿಚಾರ ಹೊರ ಬೀಳುತ್ತಿದ್ದಂತೆ ಅವರ ಬೆಂಬಲಿಗರು ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ನಿರ್ಧಾರದಿಂದ ಅಸಮಾಧಾನಗೊಂಡಿರುವ ವೀಣಾ ಕಾಶಪ್ಪನವರ್‌ ಬೆಂಬಲಿಗರು, ಅವರು ಪಕ್ಷೇತರರಾಗಿ ಸ್ಪರ್ಧಿಸಿದರು ಕೂಡ ಬೆಂಬಲಕ್ಕೆ ನಿಲ್ಲುವ ಭರವಸೆ ನೀಡಿದ್ದಾರೆ.

ಇದೀಗ ವೀಣಾ ಕಾಶಪ್ಪನವರ್‌ ಜಿಲ್ಲೆಯ ಶಾಸಕರನ್ನು ಹೊರತುಪಡಿಸಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷಾತೀತ ಬೆಂಬಲಿಗರ ಜೊತೆ ಸಭೆ ನಡೆಸಲಿದ್ದು, ಕಾಂಗ್ರೆಸ್‌ ಪರ ಪ್ರಚಾರದಲ್ಲಿ ಭಾಗಿಯಾಗುವ ಬಗ್ಗೆ, ಅಥವಾ ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಹಾಗೂ ಪಕ್ಷಾಂತರದ ಸಾಧಕ- ಭಾದಕಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ವೀಣಾ ಕಾಶಪ್ಪನವರ್‌ ಬೆಂಬಲಿಗರ ಸಭೆ ಕರೆದಿರುವುದು ರಾಜ್ಯ ನಾಯಕರಿಗೆ ದೊಡ್ಡ ತಲೆ ನೋವಾಗಿದೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ