Breaking News

ರಾಹುಲ್ ಗಾಂಧಿಗೆ ಲೋಕಸಭೆ ಚುನಾವಣೆ ಸೋಲಿ‌ನ‌ ಕನಸು ಬೀಳುತ್ತಿದೆ: ಪ್ರಹ್ಲಾದ್​ ಜೋಶಿ

Spread the love

ಬಿಜೆಪಿ, ಆರ್​​ಎಸ್​ಎಸ್​ ವಿಷವಿದ್ದಂತೆ, ಅದರ ರುಚಿ ನೋಡಬೇಡಿ ಎಂಬ ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಮಲ್ಲಿಕಾರ್ಜುನ ಖರ್ಗೆ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.

ಹುಬ್ಬಳ್ಳಿ, ಏಪ್ರಿಲ್​ 01: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಲೋಕಸಭೆ ಚುನಾವಣೆ (Lok Sabha Election) ಸೋಲಿ‌ನ‌ ಕನಸು ಬೀಳುತ್ತಿದೆ ಎಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ (Pralhad Joshi) ವಾಗ್ದಾಳಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಕೇವಲ 40 ಕ್ಷೇತ್ರ ಗೆಲ್ಲುತ್ತೇವೆ ಅಂತ ಹೇಳುತ್ತಾರೆ. ಕಾಂಗ್ರೆಸ್​ ನಾಯಕರಿಗೂ ಸೋಲುತ್ತೇವೆ ಅಂತ ಅರ್ಥ ಆಗಿದೆ. ಹೀಗಾಗಿ ಚುನಾವಣಾ ಆಯೋಗ, EVM ಮೇಲೆ ಅನುಮಾನಪಡುತ್ತಾರೆ ಎಂದರು.

ರಾಹುಲ್ ಗಾಂಧಿಗೆ ಲೋಕಸಭೆ ಚುನಾವಣೆ ಸೋಲಿ‌ನ‌ ಕನಸು ಬೀಳುತ್ತಿದೆ: ಪ್ರಹ್ಲಾದ್​ ಜೋಶಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಾಗ EVM ಸಮಸ್ಯೆ ಇರಲಿಲ್ಲ. ಆದರೆ ನಾವು ಗೆದ್ದರೆ ಮಾತ್ರ ಇವಿಎಂ ಸಮಸ್ಯೆ ಇದೆ ಅಂತ ಕಾಂಗ್ರೆಸ್​ನವರು ಹೇಳುತ್ತಾರೆ. ಕಾಂಗ್ರೆಸ್ಸಿನವರು ಸೋಲಿನ ಭಯದಿಂದ ಹತಾಶರಾಗಿ ಮಾತನಾಡುತ್ತಿದ್ದಾರೆ ಕಾಂಗ್ರೆಸ್ ಪಕ್ಷ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಮೋದಿ ಅವರ ನೇತೃತ್ವದಲ್ಲಿ ಬಹಳ ಬದಲಾವಣೆಯಾಗಿದೆ. ಬಿಜೆಪಿಯನ್ನು ಗೆಲ್ಲಿಸಬೇಕೆಂದು ಜನ‌ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.

ಬಿಜೆಪಿ, ಆರ್​​ಎಸ್​ಎಸ್​ ವಿಷವಿದ್ದಂತೆ, ಅದರ ರುಚಿ ನೋಡಬೇಡಿ ಎಂಬ ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಜೋಶಿ, ಮಲ್ಲಿಕಾರ್ಜುನ ಖರ್ಗೆ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ