Breaking News

ಶಿವಣ್ಣ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

Spread the love

ರಾಜ್ಯದಲ್ಲಿ ಲೋಕಸಭೆ ಚುನಾವಣೆ (Lok Sabha Elections) ಪ್ರಚಾರ ಅಬ್ಬರದಿಂದ ಸಾಗಿದೆ. ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್ (Geetha Shivarajkumar) ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿಯಾಗಿ (Congress Candidate) ಅಖಾಡಕ್ಕೆ ಇಳಿದಿದ್ದಾರೆ.

ಈ ಬಾರಿ ಗೀತಾ ಅವರನ್ನು ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಶಿವಣ್ಣ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಬಿಸಿಲಿನಲ್ಲಿ ವಿಶ್ರಾಂತಿ ಇಲ್ಲದೆ ನಡೆದಿದ ಹಿನ್ನೆಲೆ ನಟ ಶಿವರಾಜ್​ಕುಮಾರ್ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಶಿವರಾಜ್​ಕುಮಾರ್​ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಶಿವಮೊಗ್ಗದಲ್ಲಿ ನಿರಂತರವಾಗಿ ಸಭೆ ನಡೆಸಿದ ಗೀತಾ ಶಿವರಾಜ್​ಕುಮಾರ್​ ಬೀದಿಗಿಳಿದು ಪ್ರಚಾರ ನಡೆಸುತ್ತಿದ್ದಾರೆ. ಹಂತ ಹಂತವಾಗಿ ಕ್ಯಾಂಪೇನ್​ ನಡೆಸಲಾಗ್ತಿದೆ. ಮೊದಲ ಹಂತದ ಚುನಾವಣಾ ಪ್ರಚಾರ ಮುಗಿಸಿ ಶಿವರಾಜ್‌ಕುಮಾರ್ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಈ ವೇಳೆ ಶಿವಣ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಆಗಿದೆ.

ಗಂಭೀರ ಸಮಸ್ಯೆಯಿಲ್ಲ, ಜನರಲ್ ಚೆಕಪ್‌ ಅಷ್ಟೆ

ನಿರಂತರ ಪ್ರಚಾರದ ಕೆಲಸದಿಂದ ನಟ ಶಿವರಾಜ್‌ ಕುಮಾರ್‌ ದಣಿದಿದ್ದಾರೆ. ಯಾವುದೇ ಗಂಭೀರ ಸಮಸ್ಯೆಯಿಲ್ಲ ಎನ್ನಲಾಗ್ತಿದೆ. ಜನರಲ್ ಚೆಕಪ್‌ಗಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಶಿವಣ್ಣ ದಾಖಲಾಗಿದ್ದರು ಎನ್ನಲಾಗುತ್ತಿದೆ. ಇಂದೇ ಶಿವರಾಜ್ ಕುಮಾರ್ ಅವರು ಡಿಸ್ಜಾರ್ಜ್​ ಆಗಿ ಮನೆಗೆ ಮರಳಲಿದ್ದಾರೆ ಎನ್ನಲಾಗ್ತಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ