Breaking News

ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಂಕಷ್ಟ

Spread the love

ಚಾಮರಾನಗರ, (ಏಪ್ರಿಲ್ 01): ಈ ಬಾರಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರವನ್ನು ಗೆಲ್ಲಲು ಖುದ್ದು ಸಿಎಂ ಸಿದ್ದರಾಮಯ್ಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಹೀಗಾಗಿ ಪುತ್ರ ಯತೀಂದ್ರಗೂ (Yathindra Siddaramaiah )ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿಯುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಯತೀಂದ್ರ ಅವರು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ನೇಹಿತ ಸುನೀಲ್ ಬೊಸ್ ಗೆಲುವಿಗಾಗಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಟ ನಡೆಸಿದ್ದಾರೆ.

ಇದರ ಮಧ್ಯೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹೇಳಿಕೆಯೊಂದನ್ನು ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು.. ಅಮಿತ್ ಶಾ ವಿರುದ್ಧ ರೌಡಿ ಹೇಳಿಕೆ ಸಂಬಂಧ ಚುನಾವಣಾ ಆಯೋಗವು ಯತೀಂದ್ರ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದೆ.

ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಂಕಷ್ಟ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್​ ನೀಡಿದೆ. ಈ ಬಗ್ಗೆ ಸ್ವತಃ ಸಚಿವ ಕೆ ವೆಂಕಟೇಶ್​ ಹೇಳಿದ್ದಾರೆ. ಟಿ ನರಸೀಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ವೆಂಕಟೇಶ್, ಸಿಬಿಐ ವರದಿಯಲ್ಲಿ ಇದ್ದಿದ್ದು ಹೇಳಿದ್ದಕ್ಕೆ ಯತೀಂದ್ರ ಅವರಿಗೆ ನೋಟಿಸ್​ ಕೊಡಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಮೂಲಕ ಯತೀಂದ್ರ ಸಿದ್ದರಾಮಯ್ಯಗೆ ಚುನಾವಣೆ ಆಯೋಗ ನೋಟಿ ಜಾರಿ ಮಾಡಿರುವುದನ್ನು ಬಹಿರಂಪಡಿಸಿದ್ದಾರೆ.


Spread the love

About Laxminews 24x7

Check Also

ಧಾರವಾಡದಲ್ಲಿ 54 ಜೂಜಾಟದ ಪ್ರಕರಣಗಳು ದಾಖಲು

Spread the love ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್​​ 20 ರಿಂದ 23ರವರೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ