Breaking News

200 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ದೇಶ ಆಳುತ್ತೇವೆ ಎನ್ನುತ್ತಿರುವುದು ಹಾಸ್ಯಾಸ್ಪದ

Spread the love

ಹಾವೇರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಸ್ಪರ್ಧೆ ಮಾಡಿದ್ದೇ 200 ಸ್ಥಾನಗಳಲ್ಲಿ, ಅದರಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತದೆ ಎನ್ನುವುದನ್ನು ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಅವರು ಇಂದು ಹಾವೇರಿ ಜಿಲ್ಲೆಯ ಹಿರೆಕೆರೂರು ವಿಧಾನಸಭಾ ಕ್ಷೇತ್ರದ ಮಡ್ಲೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ 543 ಲೋಕಸಭಾ ಕ್ಷೇತ್ರದಲ್ಲಿ ಕೇವಲ 200 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ನವರು ದೇಶ ಆಳುತ್ತೇವೆ ಅಂತ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.

ನಮ್ಮ ನಾಯಕ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಮೆಚ್ಚಿ ದೇಶದಲ್ಲಿ ಬಿಜೆಪಿ 400 ಸೀಟು ಬರುತ್ತವೆ ಎಂದು ಎಲ್ಲ ಸಮೀಕ್ಷೆಗಳು ಹೇಳುತ್ತಿವೆ. ಅದರಿಂದ ಭಯಗೊಂಡ ಕಾಂಗ್ರೆಸ್ಸಿಗರು ಜನರ ದಾರಿ ತಪ್ಪಿಸಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ