Breaking News
Home / ರಾಜಕೀಯ / ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ವಿಶೇಷ ಬಸ್ ವ್ಯವಸ್ಥೆ

Spread the love

ಬಾಗಲಕೋಟೆ, ಮಾರ್ಚ್.31: ಆಂಧ್ರ ಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ (Sri Shaila Mallikarjuna Jatre) ಪ್ರತಿವರ್ಷ ಲಕ್ಷಾಂತರ ಭಕ್ತರು ನಾನಾ ಪ್ರದೇಶಗಳಿಂದ ಪಾದಯಾತ್ರೆ ಮೂಲಕ ಅಲ್ಲಿಗೆ ತೆರಳ್ತಾರೆ. ಸದ್ಯ ಭಕ್ತರ ಅನುಕೂಲಕ್ಕೆ ಸಾರಿಗೆ ಇಲಾಖೆ ಸಿಹಿ ಸುದ್ದಿ ನೀಡಿದೆ.

ಬಾಗಲಕೋಟೆ ಘಟಕದಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ (Bus Service). ಭಕ್ತರ ಅನುಕೂಲಕ್ಕೆ ನಿತ್ಯವೂ ಎರಡು ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಜಮಖಂಡಿ, ಮುಧೋಳ, ಗುಳೇದಗುಡ್ಡ, ಇಳಕಲ್ ಸೇರಿದಂತೆ ವಿವಿಧ ಭಾಗದಿಂದ ಭಕ್ತರು ಶ್ರೀಶೈಲಕ್ಕೆ ಹೋಗುತ್ತಾರೆ. ಸದ್ಯ ಬಾಗಲಕೋಟೆಯಿಂದ ಶ್ರೀಶೈಲಕ್ಕೆ 870 ರೂಪಾಯಿ ನಿಗದಿ ಮಾಡಲಾಗಿದೆ.

ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ಸಿಹಿಸುದ್ದಿ; ವಿಶೇಷ ಬಸ್ ವ್ಯವಸ್ಥೆ

ಇನ್ನು ಚಂದ್ರಮಾನ ಯುಗಾದಿ ಹಬ್ಬದ ನಿಮಿತ್ತ ಏಪ್ರಿಲ್ 3 ರಿಂದ ಏಪ್ರಿಲ್ 10 ರವರೆಗೆ ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ ನಡೆಯಲಿದೆ. ಶ್ರೀಶೈಲಕ್ಕೆ ಅನೇಕ ಕಡೆಗಳಿಂದ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ – NWKRTC)ಗೆ ಸೇರಿರುವ ಚಿಕ್ಕೋಡಿ ವಿಭಾಗದಿಂದಲೂ ಬಸ್ ಸೇವೆ ಸಿಗಲಿದೆ. ಚಿಕ್ಕೋಡಿ, ಅಥಣಿ, ರಾಯಬಾಗ, ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಮತ್ತು ಗೋಕಾಕ್ ಬಸ್ ನಿಲ್ದಾಣಗಳಿಂದ ಶ್ರೀಶೈಲಕ್ಕೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ