ರಾಯಭಾಗ : ಜಾರಕಿಹೊಳಿ ಕುಟುಂಬಕ್ಕೆ ರಾಜಕಾರಣ ಹೊಸದಲ್ಲ. ಪ್ರಿಯಾಂಕಾ ಜಾರಕಿಹೊಳಿ ಮುಗ್ದ ಹೆಣ್ಣುಮಗಳು, ಆದರೆ ತುಂಬಾ ಬುದ್ದಿವಂತೆ. ಈ ಯುವ ನಾಯಕಿಯನ್ನು ಗೆಲ್ಲಿಸುವ ಮೂಲಕ ಚಿಕ್ಕೋಡಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ರಾಯಭಾಗದಲ್ಲಿ
ಸೋಮವಾರ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದ ಸಚಿವರು, ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಡವರ ಹಸಿವನ್ನ ನೀಗಿಸಿದ್ದಾರೆ. ಚುನಾವಣೆಗೂ ಮುನ್ನ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಸದಾ ಬಡವರ ಕಷ್ಟಕ್ಕೆ ಮಿಡಿಯುವ ಪಕ್ಷ. ಬಡವರ ಏಳಿಗೆಗಾಗಿ ಈ ದೇಶಕ್ಕೆ ಹಲವು ಕಾರ್ಯಕ್ರಮಗಳನ್ನು ಕೊಟ್ಟ ಇತಿಹಾಸವಿದೆ. ಕಾಂಗ್ರೆಸ್ ಬಡವರ ಬಗ್ಗೆ ಚಿಂತಿಸುತ್ತಿದ್ದರೆ, ಬಿಜೆಪಿ ಶ್ರೀಮಂತರ ಏಳಿಗೆಗೆ ಮಾತ್ರ ಶ್ರಮಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.